ಸುರಪುರ : ಉತ್ತರಪ್ರದೇಶದ ಹಥ್ರಾಸ್ನಲ್ಲಿ ನಡೆದ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಮುಖಂಡ ನಾಗರಾಜ್ ಮಕಾಶಿ, ಇತ್ತೀಚೆಗೆ ದೇಶದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಘಟನೆಗಳು ಹೆಚ್ಚುತ್ತಿವೆ. ಮಾನವ ಸಮಾಜ ತಲೆ ತಗ್ಗಿಸುವಂತಾಗಿದೆ. ಉತ್ತರಪ್ರದೇಶದ ಹಥ್ರಾಸ್ ಜಿಲ್ಲೆಯ 19 ವರ್ಷದ ಯುವತಿಯನ್ನು ಕಾಮುಕರು ಬಲವಂತವಾಗಿ ಹೊತೊಯ್ದು ಅತ್ಯಾಚಾರ ಮಾಡಿ ಯುವತಿಗೆ ಚಿತ್ರ ಹಿಂಸೆ ನೀಡಿ ಕೊಲೆ ಮಾಡಿದ್ದಾರೆ.
ಈ ಘಟನೆಗೆ ಕಾರಣರಾದ ಕಾಮುಕರಿಗೆ ಮರಣದಂಡನೆ ವಿಧಿಸಬೇಕು, ಯುವತಿಯ ಸಾವಿಗೆ ನ್ಯಾಯ ಒದಗಿಸಬೇಕು, ಇಲ್ಲವಾದಲ್ಲಿ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಸಿದರು. ಬಳಿಕ ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ಗ್ರೇಡ್-2 ತಹಶೀಲ್ದಾರ್ ಸೋಫಿಯಾ ಸುಲ್ತಾನ್ ಅವರ ಮೂಲಕ ಸಲ್ಲಿಸಿದರು.