ETV Bharat / state

ಸೋಲನ್ನು ಸವಾಲಾಗಿ ಸ್ವೀಕರಿಸಿ ಉತ್ತಮ ಸಾಧನೆ ಮಾಡಿ: ಹಣಮಂತ ಬಂಕಲಗಿ

ಗುರುಮಠಕಲ್ ಪಟ್ಟಣದ ತಾಲೂಕಾ ಗಂಗಾಮತ ಕೋಲಿ ಸಮಾಜದ ನೌಕರರ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.

Gurumathkal
ಪ್ರತಿಭಾ ಪುರಸ್ಕಾರ ಸಮಾರಂಭ
author img

By

Published : Aug 18, 2020, 11:57 PM IST

ಗುರುಮಠಕಲ್: ಜೀವನದ ಪ್ರತಿ ಪರೀಕ್ಷೆಯಲ್ಲಿ ಸತತ ಪ್ರಯತ್ನ ಮತ್ತು ಧನಾತ್ಮಕ ಚಿಂತನೆಗಳಿಂದ ಅತ್ಯುತ್ತಮ ಸಾಧನೆ ಮಾಡಬಹುದು ಎಂದು ಆರಕ್ಷಕ ಉಪ ನಿರೀಕ್ಷಕ ಹಣಮಂತ ಬಂಕಲಗಿ ಅಭಿಪ್ರಾಯ ಪಟ್ಟರು.

ಪ್ರತಿಭಾ ಪುರಸ್ಕಾರ ಸಮಾರಂಭ

ಪಟ್ಟಣದ ತಾಲೂಕು ಗಂಗಾಮತ ಕೋಲಿ ಸಮಾಜದ ನೌಕರರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಜೀವನದ ಪ್ರತಿ ಹೆಜ್ಜೆಯಲ್ಲಿ ಸಾಧನೆಯು ನಿಂತ ನೀರಾಗಬಾರದು. ಅದು ಸತತ ಪ್ರಯತ್ನ ಮತ್ತು ಸೃಜನಾತ್ಮಕ ಆಲೋಚನೆ ಮತ್ತು ಕಟ್ಟುನಿಟ್ಟಾದ ಸಮಯ ಪಾಲನೆಯ ಮೂಲಕ ಯಶಸ್ಸನ್ನು ಗಳಿಸಬಹುದು. ಪರೀಕ್ಷೆಗಳಲ್ಲಿ ಪಡೆದ ಅಂಕಗಳು ಜೀವನದ ಉನ್ನತಿಗೆ ಪ್ರೇರಕವಾಗಿ ಸಮಾಜ ಅಭ್ಯುದಯಕ್ಕೆ ನಾಂದಿ ಹಾಡಬೇಕು. ಪ್ರತಿ ಸೋಲನ್ನು ಸವಾಲಾಗಿ ಸ್ವೀಕರಿಸಿ ಇತರರಿಗೆ ಮಾದರಿಯಾಗುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ವೃತ್ತ ಆರಕ್ಷಕ ನಿರೀಕ್ಷಕ ದೇವಿಂದ್ರಪ್ಪ ಧೂಳಖೇಡ ಮಾತನಾಡಿ, ಗಡಿಭಾಗದ ಈ ಭಾಗದಲ್ಲಿ ಗಂಗಾಮತ ಸಮಾಜದ ವಿದ್ಯಾರ್ಥಿಗಳು ವಿಜ್ಞಾನ ಮತ್ತು ಗಣಿತ ವಿಭಾಗದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಪ್ರತಿಭೆಗಳ ಅನಾವರಣಗೊಂಡಿದ್ದು ಸಂತಸ ತಂದಿದೆ ಎಂದು ಹೇಳಿದರು.

ಸಮಾಜದ ಮುಖಂಡ ರಾಜಗೋಪಾಲರೆಡ್ಡಿ ಮಾತನಾಡಿ, ಗಂಗಾಮತ ಸಮಾಜದ ವಿದ್ಯಾರ್ಥಿಗಳು ಶೈಕ್ಷಣಕವಾಗಿ ಉತ್ತಮ ಸಾಧನೆ ಮಾಡುತ್ತಿರುವುದು ಸಂತಸ ತಂದಿದೆ. ಸಮಾಜದ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಎಲ್ಲಾ ರೀತಿಯ ಸಹಕಾರ ಮತ್ತು ವಸತಿ ನಿಲಯ ಸ್ಥಾಪನೆಗಾಗಿ ಶ್ರಮಿಸಲಾಗುವುದು ಎಂದು ಹೇಳಿದರು.

ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು. ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಸಂತೋಷಕುಮಾರ್​​ ನೀರಟ್ಟಿ ಪ್ರಾಸ್ತಾವಿಕ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ತಾಲೂಕು ಗಂಗಾಮತ ಕೋಲಿ ಸಮಾಜದ ನೌಕರರ ಸಂಘದ ಅಧ್ಯಕ್ಷ ಭೀಮರಾಯ, ತಾಲೂಕು ಗಂಗಾಮತ ಸಮಾಜದ ಅಧ್ಯಕ್ಷ ಅಶೋಕ ಸಂಜನೋಳ್ ಹಾಗೂ ಜಿಲ್ಲಾ ಕೋಲಿ ಸಮಾಜದ ಉಪಾಧ್ಯಕ್ಷರು ಸಂತೋಷ ಕುಮಾರ ನಿರೇಟಿ ಹಾಗೂ ಸಮಾಜದ ನೌಕರರು ಮತ್ತು ಮುಖಂಡರು ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.