ಯಾದಗಿರಿ: ಬೊಲೆರೋ ವಾಹನ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ತಾಲೂಕಿನ ಬಾಚವಾರ್ ಸಮೀಪ ಸಂಭವಿಸಿದೆ. ಬಸವರಾಜ್(24), ಬಸವರಾಜ್ ಮೇದಾರ (23) ಹಾಗೂ ಶಿವಪ್ಪ(25) ಮೃತ ಬೈಕ್ ಸವಾರರು.
ಯಾದಗಿರಿಯಿಂದ ಭೀಮನಹಳ್ಳಿಗೆ ಹೋಗುತ್ತಿದ್ದ ಈ ಬೈಕ್ ಸವಾರರು ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಭೀಮನಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಯಾದಗಿರಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: ಪ್ರಾಧ್ಯಾಪಕನ ನಿರೀಕ್ಷಣಾ ಜಾಮೀನು ಅರ್ಜಿ ವಜಾ