ETV Bharat / state

ಬಡವರಿಗೆ ವಿತರಿಸುವ ಪಡಿತರದಲ್ಲಿ ಅವ್ಯಹಾರ ನಡೆಸಿದರೆ ಕ್ರಮ: ಸಚಿವ ಪ್ರಭು ಚೌವ್ಹಾಣ್​ ಎಚ್ಚರಿಕೆ - ಒರೊನಾ ವೈರಸ್​ ಭೀತಿ

ಯಾದಗಿರಿ ಜಿಲ್ಲೆಯಲ್ಲಿ ನಿರ್ಗತಿಕರಿಗೆ ಮತ್ತು ಬಡವರಿಗೆ ವಿತರಿಸುವ ಪಡಿತರದಲ್ಲಿ ಅವ್ಯವಹಾರ ನಡೆಸಿದರೆ ಕ್ರಮ ಕೈಗೊಳ್ಳುದಲ್ಲದೆ, ಪ್ರಕರಣ ದಾಖಲಾಗಿಸಲಾಗುತ್ತದೆ ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

The minister who held a meeting with the authorities
ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ
author img

By

Published : Apr 15, 2020, 4:56 PM IST

ಸುರಪುರ: ಬಡ ಮತ್ತು ನಿರ್ಗತಿಕರಿಗೆ ನೀಡಲಾಗುವ ಪಡಿತರದಲ್ಲಿ ಅಕ್ರಮ ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌವ್ಹಾಣ್​​​ ಎಚ್ಚರಿಸಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಈ ರೀತಿ ಸೂಚಿಸಿದರು. ಜಿಲ್ಲೆಯಲ್ಲಿ ವಿದ್ಯುತ್ ಕಡಿತ ಮಾಡಬೇಡಿ. ಖಾಸಗಿ ಆಸ್ಪತ್ರೆಗಳನ್ನು ಕಡ್ಡಾಯವಾಗಿ ತೆಗೆಯುವಂತೆ ಕ್ರಮ ವಹಿಸಲು ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿನ ಚರಂಡಿ ಸ್ವಚ್ಛಗೊಳಿಸಿ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಜಿಲ್ಲೆಯಲ್ಲಿ ಲಾಕ್‌ಡೌನ್ ವಿಫಲವಾಗಿದೆ. ಲಾಕ್‌ಡೌನ್ ಪಾಲನೆಗೆ ಕಟ್ಟುನಿಟ್ಟಾಗಿ ದಿಟ್ಟ ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕ ರಾಜುಗೌಡ ಮಾತನಾಡಿ, ಜನರಿಗೆ ವಿತರಿಸುವ ಅವ್ಯವಹಾರ ನಡೆಸುತ್ತಿರುವ ದೂರುಗಳು ಬರುತ್ತಿವೆ. ಅಂತಹ ಅಂಗಡಿ ಅಮಾನತುಗೊಳಿಸಿ, ಸೆಕ್ಷನ್​ 420 ಅಡಿ ಪ್ರಕರಣ ದಾಖಲಿಸುವುದಾಗಿ ಹಾಗೂ ತಾಲೂಕಿನ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ತಹಸೀಲ್ದಾರ್, ಪೊಲೀಸ್​ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಪುರಸಭೆ ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.