ಯಾದಗಿರಿ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜಿನ ಅವಶ್ಯಕತೆಯಿಲ್ಲ ಎಂಬ ಹೇಳಿಕೆಯನ್ನು ವಿರೋಧಿಸಿ ಅಖಿಲ ಕರ್ನಾಟಕ ಎಐಡಿಎಸ್ಓ ಸಂಘಟನೆ ವತಿಯಿಂದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಸರ್ಕಾರಿ ಪದವಿ ಕಾಲೇಜಿನ ಮುಂಭಾಗದಿಂದ ಪ್ರತಿಭಟನೆ ಪ್ರಾರಂಭಿಸಿದ ಕಾರ್ಯಕರ್ತರು ಸುಭಾಶ ವೃತ್ತದವರಿಗೂ ನಡೆಸಿದರು. ರಾಜ್ಯ ಸರ್ಕಾರದಿಂದ ಮಂಜೂರಾದ ಸರ್ಕಾರಿ ಮೆಡಿಕಲ್ ಕಾಲೇಜನ್ನು ಸಿಎಂ ಕುಮಾರಸ್ವಾಮಿ ಕೈ ಬಿಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಜಿಲ್ಲೆಗೆ ಮೆಡಿಕಲ್ ಕಾಲೇಜನ್ನು ಮಂಜೂರ ಮಾಡಬೇಕೆಂದು ಆಗ್ರಹಿಸಿದರು.
ಶಿಕ್ಷಣ, ಸಾಮಾಜಿಕ, ಆರ್ಥಿಕವಾಗಿ ಜಿಲ್ಲೆ ತೀರ ಹಿಂದುಳಿದಿದ್ದು, ಇಂತಹ ಪರಿಸ್ಥಿತಿಯಲ್ಲಿ ಮಂಜೂರಾದ ಸರ್ಕಾರಿ ಕಾಲೇಜನ್ನು ಸಿಎಂ ಕೈ ಬಿಡುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.