ಯಾದಗಿರಿ: ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಶಿಕ್ಷಣ ಇಲಾಖೆಯ ಸುತ್ತೋಲೆ ರದ್ದುಪಡಿಸುವಂತೆ ಆಗ್ರಹಿಸಿ ಯಾದಗಿರಿಯಲ್ಲಿಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಸುಭಾಷ್ ವೃತ್ತದಿಂದ ತಹಶೀಲ್ದಾರರ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅಂಗನವಾಡಿ ಕೇಂದ್ರಗಳ ಬದಲಿಗೆ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸುವ ಸರ್ಕಾರದ ನಿರ್ಧಾರವನ್ನು ವಾಪಸ್ ಪಡೆಯಬೇಕು. ಅಲ್ಲದೇ ಈ ಯೋಜನೆಯನ್ನು ಅಂಗನವಾಡಿ ಕೆಂದ್ರಗಳಲ್ಲೇ ಜಾರಿ ಮಾಡಬೇಕೆಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಆಗ್ರಹಿಸಿ, ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದಾರೆ.
ಅದಲ್ಲದೇ ಇದೆ ಡಿ.10ರಂದು ತುಮಕೂರಿನಿಂದ-ಬೆಂಗಳೂರಿನವರೆಗೂ ರಾಜ್ಯದ 80 ಸಾವಿರ ಅಂಗನವಾಡಿ ಕಾರ್ಯಕರ್ತೆಯರು ಪಾದಯಾತ್ರೆ ಮಾಡುವ ಮೂಲಕ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುವುದಾಗಿ ಸರ್ಕಾರಕ್ಕೆ ಪ್ರತಿಭಟನಾನಿರತ ಅಂಗನವಾಡಿ ಕಾರ್ಯಕರ್ತೆಯರು ಎಚ್ಚರಿಕೆ ನೀಡಿದ್ದಾರೆ.