ETV Bharat / state

ವೇತನ ನಿಗದಿಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ - ಯಾದಗಿರಿ ಸುದ್ದಿ

ಮಾಸಿಕ ವೇತನ 12 ಸಾವಿರ ನಿಗದಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಯಾದಗಿರಿಯಲ್ಲಿಂದು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

Asha activists protest
ವೇತನ ನಿಗದಿಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
author img

By

Published : Sep 23, 2020, 9:22 PM IST

ಯಾದಗಿರಿ: ಮಾಸಿಕ ವೇತನ 12 ಸಾವಿರ ನಿಗದಿಗಾಗಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಯಾದಗಿರಿಯಲ್ಲಿಂದು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ವೇತನ ನಿಗದಿಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲೆಯ ನೂರಾರು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ಕಳೆದ 10-11 ವರ್ಷಗಳಿಂದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಯಕರ್ತೆಯರಿಗೆ ಸರ್ಕಾರದಿಂದ ನೀಡುವ ವೇತನ ಅತಿ ಕಡಿಮೆಯಾಗಿದ್ದು, ಕುಟುಂಬ ನಿರ್ವಹಣೆ ಮಾಡಲು ಕಷ್ಟವಾಗಿದೆ. ಕೊರೊನಾ ಸಂದರ್ಭಗಳಲ್ಲಿ ನಾವು ಮಾಡಿದ ಸೇವೆಗಾಗಿ ದೊರಕುವ ಸಂಭಾವನೆ ಕಡಿಮೆಯಾಗಿದ್ದು, ಕಳೆದ 15 ತಿಂಗಳ ಪ್ರೋತ್ಸಾಹ ಧನ ಕೂಡ ಬಿಡುಗಡೆ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಸರ್ಕಾರ ಮಾಸಿಕ ವೇತನ 12 ಸಾವಿರ ನಿಗದಿ ಪಡಿಸುವುದರ ಜೊತೆಗೆ ಕೋವಿಡ್ ಪ್ಯಾಕೇಜ್ 3 ಸಾವಿರ ರೂ ಸಮರ್ಪಕವಾಗಿ ವಿತರಿಸುವ ಮೂಲಕ ಬಾಕಿ ಇರುವ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು ಅಂತ ಈ ಸಂದರ್ಭದಲ್ಲಿ ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರು ಒತ್ತಾಯಿಸಿದರು.

ನಂತರ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.