ಯಾದಗಿರಿ: ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪೊಲೀಸ್ ಕಾನ್ಸ್ಟೇಬಲ್ನನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಗುರಪ್ಪ ಎಂಬಾತ ಥಳಿತಕ್ಕೊಳಗಾಗಿರುವ ಪೊಲೀಸ್ ಕಾನ್ಸ್ಟೇಬಲ್ ಎಂದು ತಿಳಿದುಬಂದಿದೆ. ಕಳೆದ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಿಳೆ ಮನೆಗೆ ಬಂದಿದ್ದ ಕಾನ್ಸ್ಟೇಬಲ್, ರೆಡ್ ಹ್ಯಾಂಡ್ ಆಗಿ ಕುಟುಂಬಸ್ಥರ ಕೈಗೆ ಸಿಕ್ಕಿ ಬಿದ್ದಿದ್ದಾನೆ.
ಇದರಿಂದ ರೊಚ್ಚಿಗೆದ್ದ ಮಹಿಳೆಯ ಕುಟುಂಬಸ್ಥರು ಆತನ ಕೈಕಾಲು ಕಟ್ಟಿ, ಹಿಗ್ಗಾಮುಗ್ಗಾ ಏಟು ನೀಡಿದ್ದಾರೆ. ತನ್ನನ್ನು ಕಾಪಾಡಿ.. ಬಿಟ್ಟು ಬಿಡಿ ಅಂತ ಅಂಗಲಾಚಿದರೂ ಬಿಡದ ಜನ, ಮನಬಂದಂತೆ ಥಳಿಸಿದ್ದಾರೆ. ವ್ಯಕ್ತಿಯೊಬ್ಬರು ಮಾಹಿತಿ ನೀಡಿದ ಮೇಲೆ ಸ್ಥಳಕ್ಕೆ ಬಂದ ಪೊಲೀಸರು, ಸ್ಥಳೀಯರ ಕೈಯಿಂದ ಕಾನ್ಸ್ಟೇಬಲ್ ಬಿಡಿಸಿದ್ದಾರೆ. ಗಾಯಗೊಂಡ ಕಾನ್ಸ್ಟೇಬಲ್ ಗುರಪ್ಪ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ನಂತರ ಮಹಿಳಾ ಪೊಲೀಸ್ ಠಾಣೆಯಲ್ಲಿ ಗುರಪ್ಪ ವಿರುದ್ಧ ಮಹಿಳೆಯು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾಳೆ. ಪ್ರಕರಣ ಸಂಬಂಧ ಪೊಲೀಸರು, ಕಾನ್ಸ್ಟೇಬಲ್ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ನಟ, ಬಿಗ್ ಬಾಸ್ ವಿಜೇತ ಸಿದ್ಧಾರ್ಥ್ ಶುಕ್ಲಾ ಇನ್ನಿಲ್ಲ..!