ಯಾದಗಿರಿ: ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿಗೆ ಹಿಂಬದಿಯಿಂದ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಶಶೀಲ್ ನಮೋಷಿ ಸೇರಿದಂತೆ ಇನ್ನಿಬ್ಬರು ಅದೃಷ್ಟಾವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಿಲ್ಲೆಯ ಶಹಾಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮದ ಬಳಿ ಈ ಘಟನೆ ಕಳೆದ ರಾತ್ರಿ ನಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಹೊಲಕ್ಕೆ ನುಗ್ಗಿ ಸಂಪೂರ್ಣ ಜಖಂಗೊಂಡಿದೆ.
![bjp leader met the an accident at yadagiri](https://etvbharatimages.akamaized.net/etvbharat/prod-images/kn-ydr-03-09-acident-xmlc-safe-av-7208689_09112019160714_0911f_1573295834_265.jpg)
ಸುರಪುರದಿಂದ ಕಲಬುರಗಿ ನಗರದತ್ತ ಶಶೀಲ ನಮೋಶಿ ಕಾರಿನಲ್ಲಿ ಹೊರಟಿದ್ದರು. ರಸ್ತೆ ಪಕ್ಕದಲ್ಲಿ ಕಾರು ನಿಲ್ಲಿಸಿದಾಗ ಈ ಅಪಘಾತ ಸಂಭವಿಸಿದೆ. ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.