ETV Bharat / state

ನೆರೆ ಸಂತ್ರಸ್ತರಿಗೆ ಕೂಡಲೇ ಪರಿಹಾರ ಒದಗಿಸುವ ಕಾರ್ಯ ಆರಂಭವಾಗಲಿದೆ: ಕಟೀಲ್

ಈಗಾಗಲೇ ಎಲ್ಲಾ ನೆರೆ ಪೀಡಿತ ಸ್ಥಳಗಳ ಸರ್ವೇ ಕಾರ್ಯ ನಡೆಸಲಾಗುತ್ತಿದ್ದು, ಕೂಡಲೇ ಪರಿಹಾರ ಒದಗಿಸುವ ಕಾರ್ಯ ಆರಂಭವಾಗಲಿದೆ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

BJP President Nalin Kumar Katil visit to Surapur Taluk BJP Office
ನೆರೆ ಸಂತ್ರಸ್ತರಿಗೆ ಕೂಡಲೇ ಪರಿಹಾರ ಒದಗಿಸುವ ಕಾರ್ಯ ಆರಂಭವಾಗಲಿದೆ: ನಳೀನ್ ಕುಮಾರ್ ಕಟೀಲ್
author img

By

Published : Oct 20, 2020, 12:52 PM IST

ಸುರಪುರ (ಯಾದಗಿರಿ): ಸುರಪುರ ತಾಲೂಕು ಬಿಜೆಪಿ ಕಚೇರಿ ಹಾಗೂ ಶಾಸಕ ನರಸಿಂಹ ನಾಯಕ ರಾಜುಗೌಡ ಅವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು ಬೆಳಗ್ಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈಗಾಗಲೇ ಬೀದರ್ ಮತ್ತು ಕಲಬುರಗಿ ಭಾಗದಲ್ಲಿನ ಪ್ರವಾಹ ಪರಿಸ್ಥಿತಿಯನ್ನು ವೀಕ್ಷಿಸಿದ್ದೇವೆ. ನಮ್ಮ ಸರ್ಕಾರ ಪ್ರವಾಹ ಸಂತ್ರಸ್ತರಿಗೆ ಎಲ್ಲಾ ರೀತಿಯ ನೆರವನ್ನು ನೀಡುತ್ತಿದೆ. ಈಗಾಗಲೇ ಮನೆ ಕಳೆದುಕೊಂಡವರ ಖಾತೆಗೆ ತಾತ್ಕಾಲಿಕ ಪರಿಹಾರವಾಗಿ ಹತ್ತು ಸಾವಿರ ರೂಪಾಯಿ ಜಮೆ ಮಾಡಲಾಗುತ್ತಿದೆ. ಎಲ್ಲಾ ನೆರೆಪೀಡಿತ ಸ್ಥಳಗಳ ಸರ್ವೇ ಕಾರ್ಯ ನಡೆಸಲಾಗುತ್ತಿದೆ. ಸರ್ಕಾರದಿಂದ ಎಲ್ಲಾ ಸೌಲಭ್ಯಗಳು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಕೂಡಲೇ ಪರಿಹಾರ ಒದಗಿಸುವ ಕಾರ್ಯ ಆರಂಭವಾಗಲಿದೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ನರಸಿಂಹ ನಾಯಕ ರಾಜುಗೌಡ, ಯಾದಗಿರಿ ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ, ಜಿಲ್ಲಾ ಬಿಜೆಪಿ ಅಧ್ಯಕ್ಷ ಶರಣು ಭೂಪಾಲ್ ರೆಡ್ಡಿ ಸೇರಿದಂತೆ ಅನೇಕ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.