ETV Bharat / state

ಪ್ರೀತಿ ವಿಚಾರವಾಗಿ ಬಿತ್ತು ಯುವಕನ ಹೆಣ; ಯುವತಿ ಸಂಬಂಧಿಕರ ಮೇಲೆ ಕೊಲೆ ಆರೋಪ - Boy murdered in Yadagiri

ಪ್ರೀತಿಸುತ್ತಿದ್ದ ವಿಷಯ ಹುಡುಗಿಯ ಕುಟುಂಬಸ್ಥರಿಗೆ ತಿಳಿದು, ಯುವತಿ ಮನೆಯವರೇ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

Boy murdered in Yadagiri
ಪ್ರೀತಿ ವಿಚಾರವಾಗಿ ಬಿತ್ತು ಹೆಣ
author img

By

Published : Jan 3, 2021, 2:51 PM IST

ಯಾದಗಿರಿ: ಇಬ್ಬರು ಪ್ರೀತಿಸುತ್ತಿದ್ದ ವಿಚಾರ ಹುಡುಗಿಯ ಕುಟುಂಬಸ್ಥರಿಗೆ ತಿಳಿದಿದೆ. ಹೀಗಾಗಿ ಯುವಕನ ಮೇಲೆ ಹಲ್ಲೆ ಮಾಡಿ ಬಳಿಕ ಬಲವಂತವಾಗಿ ವಿಷ ಕುಡಿಸಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಹೊರ ವಲಯದಲ್ಲಿ ನಡೆದಿದೆ.

ಯಾದರಿಗಿಯಲ್ಲಿ ಯುವಕನ ಕೊಲೆ ಶಂಕೆ

ಶಹಾಪುರ ನಗರದ ಆಶ್ರಯ ಕಾಲೋನಿಯ ಮೈನಾರಿಟಿ ಹಾಸ್ಟೆಲ್ ಬಳಿ ಈ ಘಟನೆ ನಡೆದಿದೆ. ಶಹಪುರ ತಾಲೂಕಿನ ಸಾದ್ಯಾಪುರ ಗ್ರಾಮದ ಸಂತೋಷ್ (22) ಮೃತ ಯುವಕನೆಂದು ಗುರುತಿಸಲಾಗಿದೆ. ಸಂತೋಷ್ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಇಬ್ಬರ ಪ್ರೀತಿ ವಿಚಾರ ಯುವತಿ ಮನೆಯವರಿಗೆ ತಿಳಿದು, ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಬಾರ್ ಕ್ಯಾಷಿಯರ್ ಮೇಲೆ ಹಲ್ಲೆ : ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

ಈ ಕುರಿತು ಶಹಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಪಿಐ ಚೆನ್ನಯ್ಯ ಹಿರೇಮಠ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.