ETV Bharat / state

ರಾಜ್ಯದಲ್ಲಿನ ಎಲ್ಲಾ ಶಾಲೆಗಳ ಶುಲ್ಕ ಮನ್ನಾಗೆ ಆಗ್ರಹಿಸಿ ಬಿಎಸ್‌ಪಿ ಪ್ರತಿಭಟನೆ

ಮಕ್ಕಳನ್ನು ಶಾಲೆಗೆ ಕಳಿಸಲಾಗದ ಸ್ಥಿತಿಗೆ ಪೋಷಕರು ತಲುಪಿದ್ದಾರೆ. ಅನೇಕರು ಖಾಸಗಿ ಶಾಲೆಗೆ ಶುಲ್ಕ ಕಟ್ಟಲಾಗದೇ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಲು ಮುಂದಾಗಿದ್ದಾರೆ..

BSP protests demanding waiver of all schools fee in the state
ರಾಜ್ಯದಲ್ಲಿನ ಎಲ್ಲಾ ಶಾಲೆಗಳ ಶುಲ್ಕ ಮನ್ನಾಕ್ಕೆ ಆಗ್ರಹಿಸಿ ಬಿಎಸ್‌ಪಿ ಪ್ರತಿಭಟನೆ
author img

By

Published : Sep 18, 2020, 10:13 PM IST

ಸುರಪುರ(ಯಾದಗಿರಿ): ರಾಜ್ಯದಲ್ಲಿನ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿನ ವಿದ್ಯಾರ್ಥಿಗಳ ಶುಲ್ಕ ಮನ್ನಾ ಮಾಡುವಂತೆ ಆಗ್ರಹಿಸಿ ಬಿಎಸ್‌ಪಿ ಪಕ್ಷದಿಂದ ಪ್ರತಿಭಟಿಸಲಾಯಿತು.

ರಾಜ್ಯದಲ್ಲಿನ ಎಲ್ಲಾ ಶಾಲೆಗಳ ಶುಲ್ಕ ಮನ್ನಾಗೆ ಆಗ್ರಹಿಸಿ ಬಿಎಸ್‌ಪಿ ಪ್ರತಿಭಟನೆ

ಈ ವೇಳೆ ಮಾತನಾಡಿದ ಬಿಎಸ್‌ಪಿ ತಾಲೂಕು ಅಧ್ಯಕ್ಷ ಶರಣು ಹನ್ಸೂರ್, ದೇಶದಲ್ಲಿನ ಸುಮಾರು 18 ಕೋಟಿಯಷ್ಟು ಅಸಂಘಟಿತ ಕಾರ್ಮಿಕರು ಕೊರೊನಾ ಹಾವಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಅನೇಕ ವಲಯಗಳ ಕಾರ್ಮಿಕರು ಹಾಗೂ ಬಡ ಜನರು ತೀವ್ರ ಸಂಕಷ್ಟದಲ್ಲಿದ್ದಾರೆ.

ಮಕ್ಕಳನ್ನು ಶಾಲೆಗೆ ಕಳಿಸಲಾಗದ ಸ್ಥಿತಿಗೆ ಬಂದು ತಲುಪಿದ್ದಾರೆ. ಅನೇಕರು ಖಾಸಗಿ ಶಾಲೆಗೆ ಶುಲ್ಕ ಕಟ್ಟಲಾಗದೇ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಲು ಮುಂದಾಗಿದ್ದಾರೆ. ಆದ್ದರಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿನ ಶುಲ್ಕ ಮನ್ನಾ ಮಾಡಿ, ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ದೊರೆಯಲು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿನ ವಿದ್ಯಾರ್ಥಿಗಳ ಶುಲ್ಕ ಮನ್ನಾ ಮಾಡುವಂತೆ ತಹಶೀಲ್ದಾರ್​ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.