ಯಾದಗಿರಿ: ಬೈಕ್ಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ, ಜಿಲ್ಲೆಯ ಹುಣಸಗಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಸಾಬಣ್ಣ ಜಾಲಿಬೆಂಚಿ (30), ಹಣಮಂತ ಹಳ್ಳಿ(41) ಅಪಘಾತದಲ್ಲಿ ಮೃತಪಟ್ಟವರು. ಇವರು ಹುಣಸಗಿ ತಾಲೂಕಿನ ಕಾಮನಟಗಿ ಗ್ರಾಮದ ನಿವಾಸಿಗಳೆಂದು ತಿಳಿದು ಬಂದಿದೆ. ಕಾಮನಟಗಿಯಿಂದ ಹುಣಸಗಿಗೆ ತೆರಳುತ್ತಿರುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ನಂತರ ಕಾರ್ ಸಮೇತ ಚಾಲಕ ಪರಾರಿಯಾಗಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಸಂಬಂಧ ಹುಣಸಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.