ಗುರುಮಠಕಲ್: ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬೊಲೆರೊ ವಾಹನವು ಕಾರ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 17 ವಿದ್ಯಾರ್ಥಿಗಳು ಗಾಯಗೊಂಡಿದ್ದು, 7 ಜನ ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಮೂವರು ಸಾರ್ವಜನಿಕರು ಗಾಯಗೊಂಡಿದ್ದಾರೆ.
ಗುರುಮಠಕಲ್ ಹೊರವಲಯದ ಬುದೂರು ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಬಸ್ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳು ಗೂಡ್ಸ್ ಸಾಗಿಸುವ ವಾಹನದಲ್ಲಿ ಗುಂಪು ಗುಂಪಾಗಿ ಗುರುಮಠಕಲ್ ಪಟ್ಟಣದಿಂದ ತಮ್ಮ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.
ಬಾರದ ಆಂಬ್ಯುಲನ್ಸ್... ಟ್ರ್ಯಾಕ್ಟರ್ನಲ್ಲಿ ಆಸ್ಪತ್ರೆಗೆ:
ಗುರುಮಠಕಲ್‌ನಿಂದ ಕಾಲ್ನಡಿಗೆ ದೂರದಲ್ಲಿ ಸಂಭವಿಸಿದ್ದು, 108ಗೆ ಕರೆ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆಂಬ್ಯುಲನ್ಸ್ ಬಾರದ ಹಿನ್ನೆಲೆ ಗಾಯಾಳುಗಳನ್ನು ಟ್ರ್ಯಾಕ್ಟರ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಯಿತು.
7 ಜನ ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದು, ರಾಯಚೂರು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಇನ್ನೂಳಿದ ವಿದ್ಯಾರ್ಥಿಗಳು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುಮಠಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಐ ಖಾಜಾ ಹುಸೇನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.