ಯಾದಗಿರಿ: ಕೇಂದ್ರ ಸಚಿವ ಭಗವಂತ ಖೂಬಾ ಅವರ ನೇತೃತ್ವದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ನಾಡ ಬಂದೂಕಿನಿಂದ ಗುಂಡು ಹಾರಿಸಿ ಕಾರ್ಯಕರ್ತರು ಕೇಂದ್ರ ಸಚಿವರಿಗೆ ಸ್ವಾಗತ ಕೋರಿರುವ ಘಟನೆ ಬೆಳಕಿಗೆ ಬಂದಿದೆ.
ಕಲಬುರಗಿ ಜಿಲ್ಲೆಯಿಂದ ಜನಾಶೀರ್ವಾದ ಯಾತ್ರೆ ಯಾದಗಿರಿಗೆ ತೆರಳಿತ್ತು. ಈ ವೇಳೆ, ಯಾದಗಿರಿ ತಾಲೂಕಿನ ಯರಗೋಳ್ ಬಳಿ ಮೂರು ನಾಡ ಬಂದೂಕುಗಳಿಂದ ಬಿಜೆಪಿ ಕಾರ್ಯಕರ್ತರು ಗಾಳಿಯಲ್ಲಿ ಗುಂಡು ಹಾರಿಸಿ ಕೇಂದ್ರ ಸಚಿವರಿಗೆ ಸ್ವಾಗತ ಕೋರಿದರು.
ತಮ್ಮ ಎದುರೇ ಗುಂಡು ಹಾರಿಸಿದರೂ ಪೊಲೀಸರು ಕೈ ಕಟ್ಟಿ ಕುಳಿತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ವಿಷಯ ಈಗ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೂ ಗ್ರಾಸವಾಗಿದೆ.
ಓದಿ: RSS ನವರು ಭಾರತದ ನಿಜವಾದ ತಾಲಿಬಾನಿಗಳು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ