ಯಾದಗಿರಿ: ಸರಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಕುಖ್ಯಾತ ಸರಗಳ್ಳನೊಬ್ಬನನ್ನ ಬಂಧಿಸುವಲ್ಲಿ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದರೆ..
ಕಲಬುರಗಿ ಮೂಲದ ಮಹಮ್ಮದ್ ಆಸಿಫ್ ಬಂಧಿತ ಆರೋಪಿ. ಬಂಧಿತನಿಂದ ಸುಮಾರು 2 ಲಕ್ಷ 80 ಸಾವಿರ ರೂ. ಮೌಲ್ಯದ 70 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಿಪಿಐ ಶರಣಗೌಡ ನ್ಯಾಮಣ್ಣನವರ ಹಾಗೂ ಪಿಎಸ್ಐ ವೀರಣ್ಣ ಮಗಿ ನೇತೃತ್ವದಲ್ಲಿ ಅಧಿಕಾರಿಗಳು ಕಾರ್ಯಚರಣೆ ನಡೆಸಿ ಜಿಲ್ಲೆಯ ಹಲೆವೆಡೆ ಸರಗಳ್ಳತನವೆಸಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ 2019 ಮತ್ತು 2020ರ ಸಾಲಿನಲ್ಲಿನ ನಾಲ್ಕು ಪ್ರಕರಣಗಳನ್ನು ಭೇದಿಸಿದ್ದಾರೆ.
ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ.