ಯಾದಗಿರಿ: ಯುವತಿಯೋರ್ವಳ ಪೋಷಕರು ಮಗಳ ಬಾಲ್ಯ ವಿವಾಹಕ್ಕೆ ಯತ್ನಿಸುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿ ಬಾಲ್ಯ ವಿವಾಹವನ್ನು ತಡೆಯುವ ಮೂಲಕ ಆಕೆಯನ್ನು ರಕ್ಷಣೆ ಮಾಡಿದ್ದಾರೆ.
ಯಾದಗಿರಿ ತಾಲೂಕಿನ ವಿಶ್ವಾಸಪುರ ತಾಂಡಾದಲ್ಲಿ 16 ವರ್ಷದ ಯುವತಿಯ ಮದುವೆಗೆ ಸಿದ್ಧತೆ ನಡೆಸಲಾಗಿತ್ತು, ವಿಷಯ ತಿಳಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಬಾಲ್ಯ ವಿವಾಹ ತಡೆದಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಜೊತೆ ಯುವತಿಯ ಮದುವೆ ನಿಶ್ಚಯವಾಗಿತ್ತು. ಅಧಿಕಾರಿಗಳು ಸಕಾಲಕ್ಕೆ ತೆರಳಿ, ವಿವಾಹ ತಡೆದು ಯುವತಿಯನ್ನು ರಕ್ಷಿಸಿ ಪೋಷಕರಿಗೆ ಹಾಗೂ ಸಂಬಂಧಿಕರಿಗೆ ಕಾನೂನು ತಿಳುವಳಿಕೆ ಹೇಳಿ ಎಚ್ಚರಿಕೆ ನೀಡಿದ್ದಾರೆ.
ಬಾಲ್ಯ ವಿವಾಹ ತಡೆದ ನಂತರ ಆಕೆಯನ್ನು ಮಕ್ಕಳ ಕಲ್ಯಾಣ ಸಮಿತಿ ಕಚೇರಿಗೆ ಒಪ್ಪಿಸಿದ್ದಾರೆ.