ETV Bharat / state

ಸಿಲಿಂಡರ್ ದುರಂತ: ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರಧನ ವಿತರಿಸಿದ ಸಿಎಂ - cylinder explosion , 15 people died

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಉಂಟಾದ ಬೆಂಕಿ ಅವಘಡದಲ್ಲಿ ಮೃತಪಟ್ಟ 15 ಜನರ ಕುಟುಂಬದ ಸದಸ್ಯರಿಗೆ ತಲಾ 5 ಲಕ್ಷ ರೂ.ಗಳ ಪರಿಹಾರಧನವನ್ನು ಸಿಎಂ ಬಸವರಾಜ ಬೊಮ್ಮಾಯಿ ವಿತರಿಸಿದ್ದಾರೆ. ಮಡಿದವರ ಮಕ್ಕಳ ವಿದ್ಯಾಭ್ಯಾಸಕ್ಕೆ ತಕ್ಕಂತೆ ಸರ್ಕಾರಿ ನೌಕರಿ ಕೊಡಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಇದೇ ವೇಳೆ ಭರವಸೆ ನೀಡಿದ್ದಾರೆ.

cm-bommai-issued-compensation-to-the-deceased-persons-family
ಸಿಲಿಂಡರ್ ದುರಂತ: ಮೃತಪಟ್ಟ ವ್ಯಕ್ತಿಗಳ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರಧನ ವಿತರಿಸಿದ ಸಿಎಂ
author img

By

Published : Mar 19, 2022, 10:55 PM IST

ಯಾದಗಿರಿ : ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಉಂಟಾದ ಬೆಂಕಿ ಅವಘಡದಲ್ಲಿ ಮೃತಪಟ್ಟ 15 ಜನರ ಕುಟುಂಬದ ಸದಸ್ಯರಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ ಚೆಕ್ ಅನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸೀಮಂತದ ಸಂಭ್ರಮದಲ್ಲಿದ್ದ ಮನೆಯಲ್ಲಿ ಸಿಲಿಂಡರ್ ದುರಂತದಿಂದ ಸೂತಕದ ಛಾಯೆ ಆವರಿಸಿದೆ. ಗಾಯಗೊಂಡವರಲ್ಲಿ ಸುಮಾರು 15 ಮಂದಿ ಮೃತಪಟ್ಟಿರುವುದು ತುಂಬಾ ದುಃಖದ ಸಂಗತಿ. ಮೃತರ ಕುಟುಂಬದ ನೆರವಿಗೆ ಸರ್ಕಾರ ಇರಲಿದೆ ಎಂದು ಅಭಯ ನೀಡಿದರು.

ಸಿಲಿಂಡರ್ ದುರಂತದ ಬಗ್ಗೆ ಸಿ ಎಂ ಬಸವರಾಜ ಬೊಮ್ಮಾಯಿ ಮಾತನಾಡುತ್ತಿರುವುದು...

ಈ ದುರ್ಘಟನೆ ನಡೆದ ತಕ್ಷಣ ಸಚಿವರು, ಶಾಸಕರು, ಅಧಿಕಾರಿಗಳು ಆಸ್ಪತ್ರೆಯಲ್ಲಿ ಗಾಯಾಳುಗಳ ಚಿಕಿತ್ಸೆಗೆ ಯಾವುದೇ ಲೋಪವಾಗದಂತೆ ಆಸ್ಪತ್ರೆಯ ಉನ್ನತ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ಸಾಕಷ್ಟು ಪ್ರಯತ್ನ ಮಾಡಿರುವುದಾಗಿ ಹೇಳಿದ್ದಾರೆ. ಕೆಲ ಗಾಯಾಳುಗಳು ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದೆ ಎಂದರು. ಈ ದುರಂತದಲ್ಲಿ ಮಡಿದವರ ಮಕ್ಕಳ ವಿದ್ಯಾಭ್ಯಾಸಕ್ಕೆ ತಕ್ಕಂತೆ ಸರ್ಕಾರಿ ನೌಕರಿ ಕೊಡಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಇದೇ ವೇಳೆ ಸಿಎಂ ಅಭಯ ನೀಡಿದರು.

ಸಿಲಿಂಡರ್ ಸ್ಫೋಟದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದ್ದು, ವರದಿ ಬಂದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಪಶುಸಂಗೋಪನೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್, ಸಂಸದರಾದ ರಾಜಾ ಅಮರೇಶ್ವರ ನಾಯಕ, ಡಾ. ಉಮೇಶ್ ಜಾಧವ್, ನಿಜಶರಣ ಅಂಬಿಗರ ಚೌಡಯ್ಯನವರ ಅಭಿವೃದ್ಧಿ ನಿಗಮದ ಅಧ್ಯಕ್ಷ, ಮಾಜಿ ಸಚಿವ ಬಾಬುರಾವ್ ಚಿಂಚನಸೂರ, ಶಾಸಕರಾದ ವೆಂಕಟರೆಡ್ಡಿ ಮುದ್ನಾಳ, ಶರಣಬಸಪ್ಪಗೌಡ ದರ್ಶನಾಪುರ್, ಎಂಎಲ್ಸಿ ಬಿ.ಜಿ. ಪಾಟೀಲ್, ಕಾಡಾ ಅಧ್ಯಕ್ಷ ಶರಣಪ್ಪ ತಳವಾರ್, ಎಸ್ಪಿ ಡಾ. ಸಿ.ಬಿ.ವೇದಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

ಓದಿ : ಕಳ್ಳನ ಹಿಡಿಯಲು ಆತನ ಹೆಸರಿನಲ್ಲೇ 'ವಾಟ್ಸ್‌ಆ್ಯಪ್‌ ಗ್ರೂಪ್‌'.. ಪೊಲೀಸರ ಮಾಸ್ಟರ್ ಪ್ಲಾನ್​!

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.