ಯಾದಗಿರಿ : ಅತಿವೃಷ್ಟಿಯಿಂದ ಹಾನಿಗೊಳಗಾದ ಯಾದಗಿರಿಯ ಹಲವು ಪ್ರದೇಶಗಳಿಗೆ ಸಿಎಂ ಯಡಿಯೂರಪ್ಪ ಇಂದು ವೈಮಾನಿಕ ಸಮೀಕ್ಷೆ ಕೈಗೊಂಡರು.
ಬಳ್ಳಾರಿಯ ತೋರಣಗಲ್ನಿಂದ ಹೆಲಿಕಾಪ್ಟರ್ನಲ್ಲಿ ಹೊರಟ ಸಿಎಂ, ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು. ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಯಾದಗಿರಿಯ ಹಲವು ಪ್ರದೇಶಗಳು ಪ್ರವಾಹದ ಹೊಡೆತಕ್ಕೆ ಸಿಲುಕಿ ನಲುಗಿದ್ದವು. ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದ್ದಲ್ಲದೆ ಮನೆ, ಮಠ ಕಳೆದುಕೊಂಡು ಜನ ಬೀದಿಗೆ ಬಂದಿದ್ದಾರೆ. ಈ ಹಿಂದೆ ಕಂದಾಯ ಸಚಿವ ಆರ್.ಅಶೋಕ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿ ಸರ್ಕಾರಕ್ಕೆ ವರದಿ ನೀಡಿದ್ದರು.

ಇಂದು ಸಿಎಂ ಬಿಎಸ್ವೈ ವೈಮಾನಿಕ ಸಮೀಕ್ಷೆ ಮಾಡಿದ್ದಾರೆ. ಸಿಎಂಗೆ ಸಚಿವ ಪ್ರಭು ಚವ್ಹಾಣ್, ಬಸವರಾಜ ಬೊಮ್ಮಾಯಿ, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಸಾಥ್ ನೀಡಿದರು.