ಯಾದಗಿರಿ: ನಾಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆ ಶಾಸಕ ವೆಂಕಟರೆಡ್ಡಿ ಮುದ್ನಾಳ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದರು.
ನಾಳೆ ಮಧ್ಯಾಹ್ನ ಯಾದಗಿರಿ ತಾಲೂಕಿನ ಮುದ್ನಾಳ ಸಮೀಪದ ಜಿಲ್ಲಾಸ್ಪತ್ರೆಯ ಆವರಣದಲ್ಲಿ 560 ಕೋಟಿ ರೂ. ವೆಚ್ಚದ ಮೆಡಿಕಲ್ ಕಾಲೇಜು ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಹೀಗಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಶಾಸಕ ವೆಂಕಟರೆಡ್ಡಿ ಮುದ್ನಾಳ, ನಾಳೆಯ ಕಾರ್ಯಕ್ರಮಕ್ಕೆ 20 ಸಾವಿರಕ್ಕಿಂತ ಹೆಚ್ಚು ಜನ ಸೇರುವ ಸಾಧ್ಯತೆ ಇದೆ. ಕಾರ್ಯಕ್ರಮಕ್ಕೆ ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ ಡಾ. ಸುಧಾಕರ್, ಪ್ರಭು ಚವ್ಹಾಣ್ ಸೇರಿದಂತೆ ಹಲವು ಗಣ್ಯರು ಆಗಮಿಸಿಲಿದ್ದಾರೆ ಎಂದು ತಿಳಿಸಿದರು.