ಯಾದಗಿರಿ: ಜಿಲ್ಲೆಯ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಚಂಡ್ರಿಕಿ ಗ್ರಾಮಕ್ಕೆ ಸಿ ಎಂ ಕುಮಾರಸ್ವಾಮಿ ಜೂನ್ 21 ರಂದು ಗ್ರಾಮ ವಾಸ್ತವ್ಯ ಮಾಡುವ ಹಿನ್ನಲೆ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ್ ಜಿಲ್ಲಾಧಿಕಾರಿ ಕೂರ್ಮರಾವ ನೇತೃತ್ವದಲ್ಲಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

ಜೂನ್ 21 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ವರಿಗೆ ಮುಖ್ಯಮಂತ್ರಿಗಳ ಜನತಾ ದರ್ಶನ ಕಾರ್ಯಕ್ರಮವಿರುತ್ತದೆ. ಹೀಗಾಗಿ ಸಾರ್ವಜನಿಕರು ತಮ್ಮ ಕುಂದು ಕೊರತೆಗಳೊಂದಿಗೆ ಬರುತ್ತಾರೆ. ಹೀಗಾಗಿ ಅಧಿಕಾರಿಗಳು ಸಾರ್ವಜನಿಕರ ಅನುಕೂಲಕ್ಕಾಗಿ ಇಲಾಖಾವಾರು ಪ್ರಗತಿ ವರದಿ ಸಿದ್ಧತೆಯನ್ನು ಮಾಡಿಕೊಳ್ಳಬೇಕು ಎಂದಿದ್ದಾರೆ.
ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಚಂಡ್ರಕಿ ಗ್ರಾಮ ವಾಸ್ತವ್ಯದ ಸರಕಾರಿ ಶಾಲೆಯ ಕೋಣೆಗಳು ,ಶೌಚಾಲಯ ,ಮೂಲಭೂತ ಸೌಕರ್ಯಗಳಾದ ಸಾರ್ವಜನಿಕರಿಗೆ ಕುಡಿಯುವ ನೀರು, ಊಟ, ವಿದ್ಯುತ್ ,ವೇದಿಕೆ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು ಶಾಲೆಯ ಆವರಣದ ಮೈದಾನದಲ್ಲಿ ಆಯೋಜಿಸುವ ಜನತಾ ದರ್ಶನದ ಕಾರ್ಯಕ್ರಮದ ಕುರಿತು ಜಿಲ್ಲಾಧಿಕಾರಿ ಕೂರ್ಮರಾವರಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಶಾಸಕರಾದ ನಾಗಣ್ಣಗೌಡ ಕಂದಕೂರ , ಕಲಬುರಗಿ ಪ್ರಾದೇಶಿಕ ಆಯುಕ್ತ ಸುಭೋದ ಯಾದವ, ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ಬಿ ಎನ್ ಕೃಷ್ಣಯ್ಯ, ಜಿಲ್ಲಾಧಿಕಾರಿಗಳಾದ ಕೂರ್ಮರಾವ ,ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜಶೇಖರಗೌಡ ಪಾಟೀಲ್,ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಖುಷಿಕೇಶ ಭಗವಾನ,ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಕವಿತಾ ಮನ್ನಿಕೇರಿ ,ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಈ ಸಂದರ್ಭದಲ್ಲಿ ಹಾಜರಿದ್ದರು.