ಯಾದಗಿರಿ : ಇಲ್ಲಿನ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಪಾಲಿಟೆಕ್ನಿಕ್ ನಿರ್ಮಾಣ ಹಂತದಲ್ಲಿರುವ ಹಾಸ್ಟೆಲ್ ಕಟ್ಟಡದಲ್ಲಿ ನಡೆದಿದೆ.
ಜಿಲ್ಲೆಯ ಸುರಪುರ ತಾಲೂಕಿನ ಶೆಟ್ಟಿಗೆರೆಯ ನಿವಾಸಿ ಭೀಮಾಶಂಕರ ನೇಣಿಗೆ ಶರಣಾದ ವಿದ್ಯಾರ್ಥಿ. ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲಾವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೆಟ್ರಿಕ್ ವಸತಿ ನಿಲಯದಲ್ಲಿ ವಾಸವಿದ್ದನು. ವಿದ್ಯಾರ್ಥಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಡಿವೈಎಸ್‌ಪಿ ಟಿ. ಮಂಜುನಾಥ್, ಪೊಲೀಸ್ ಇನ್ಸ್ಪೆಕ್ಟರ್ ಸುನೀಲ್‌ಕುಮಾರ್ ಮೂಲಿಮನಿ, ಸಮಾಜ ಕಲ್ಯಾಣ ಇಲಾಖೆಯ ಎಸ್‌ಸಿ ವಿಭಾಗದ ಸಹಾಯ ನಿರ್ದೇಶಕ ಸತ್ಯನಾರಾಯಣ ದರಬಾರಿ, ಎಸ್‌ಟಿ ವಿಭಾಗದ ಸಹಾಯಕ ನಿರ್ದೇಶಕ ಮಹ್ಮದ್ ಸಲೀಂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಲ್ಲಿ ವಸತಿ ನಿಲಯದ ವಿದ್ಯಾರ್ಥಿಗಳು, ಕುಟುಂಬಸ್ಥರು ಮತ್ತು ಸಂಬಂಧಿಕರು ಜಮಾಯಿಸಿದ್ದರು. ಮೃತ ವಿದ್ಯಾರ್ಥಿಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ : ದಾವಣಗೆರೆಯಲ್ಲಿ ಕೈಚಳಕ ತೋರಿದ ಕಳ್ಳರು: 80 ಗ್ರಾಂ ಬಂಗಾರ, ಅರ್ಧ ಕೆಜಿ ಬೆಳ್ಳಿ ಕಳವು