ಯಾದಗಿರಿ: ಮಹಾರಾಷ್ಟ್ರದಿಂದ ಆಗಮಿಸಿದ 13 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 822 ಕ್ಕೆ ಏರಿಕೆಯಾಗಿದೆ.
ಯಾದಗಿರಿ ಜಿಲ್ಲೆಯಲ್ಲಿ ಮಹಾರಾಷ್ಟ್ರದ ನಂಜು ರಣಕೇಕೆ ಹಾಕುತ್ತಿದ್ದು, ಇತ್ತೀಚಿಗೆ ಮಹಾರಾಷ್ಟ್ರದ ನಾನಾ ಭಾಗಗಳಿಂದ ಆಗಮಿಸಿದ್ದ 13 ವಲಸಿಗರನ್ನು ಜಿಲ್ಲೆಯ ವಿವಿಧ ಕ್ವಾರೆಂಟೈನ್ ಕೇಂದ್ರಗಳಲ್ಲಿ ಇರಿಸಲಾಗಿತ್ತು. ಈ 9 ಮಂದಿಯಲ್ಲಿ ಸೋಂಕು ಇರುವುದು ಖಚಿತವಾಗಿದ್ದು, ಸೋಂಕಿತರನ್ನೆಲ್ಲರನ್ನು ನಿಗದಿತ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಪೈಕಿ ಇಲ್ಲಿಯವರೆಗೆ 305 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಇನ್ನು 516 ಪ್ರಕರಣಗಳು ಸಕ್ರಿಯವಾಗಿದೆ. ಈ ವರೆಗೆ ಒಬ್ಬರು ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದಿಂದ ಆಗಮಿಸಿದ ವಲಸಿಗರಲ್ಲಿಯೇ ಕೊರೊನಾ ಸೋಂಕು ಗಣನೀಯವಾಗಿ ಏರುತ್ತಿರುವ ಹಿನ್ನೆಲೆ, ಜಿಲ್ಲೆಯ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.