ಸುರಪುರ: ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆ ಶಾಸಕ ರಾಜುಗೌಡ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳಿಗೆ ಸುರಪುರ ಮತ್ತು ಹುಣಸಗಿ ತಾಲೂಕಿನ ಎಲ್ಲ ಗ್ರಾಮೀಣ ಭಾಗದಲ್ಲಿನ ಜನರನ್ನು ಭೇಟಿ ಮಾಡಿ, ಅಲ್ಲದೇ ನಿಮಗೆ ವಹಿಸಿದ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಸೂಚಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಶಾಸಕರು, ಎಲ್ಲ ಜನರಲ್ಲಿ ಕೈಮುಗಿದು ಬೇಡಿಕೊಳ್ಳುತ್ತೇನೆ, ಯಾರೂ ಮನೆಯಿಂದ ಹೊರಗೆ ಬರಬೇಡಿ, ಎರಡು ತಿಂಗಳ ದಿನಸಿ ಮನೆಗಳಿಗೆ ಬರಲಿದೆ ಎಂದು ಆಶ್ವಾಸನೆ ಕೊಟ್ಟರು.