ಯಾದಗಿರಿ: ವಠಾರ ಶಾಲೆಯಲ್ಲಿ ಪಾಠ ಮಾಡಿದ್ದ ಶಿಕ್ಷಕರೊಬ್ಬರಿಗೆ ಕೋವಿಡ್ ಸೋಂಕು ವಕ್ಕರಿಸಿದ್ದು, ತರಗತಿಯಲ್ಲಿ ಭಾಗವಹಿಸಿದ್ದ ಮಕ್ಕಳಿಗೆ ಕೊರೊನಾ ಭೀತಿ ಎದುರಾಗಿದೆ.
ಕೊರೊನಾ ಹಿನ್ನೆಲೆ ಮಕ್ಕಳ ವಿದ್ಯಾಭ್ಯಾಸ ಕುಂಠಿತವಾಗಬಾರದೆಂದು ಸರ್ಕಾರ ವಿದ್ಯಾಗಮ ಯೋಜನೆ ಜಾರಿಗೆ ತಂದಿದೆ. ಸರ್ಕಾರಿ ಶಾಲೆ ಶಿಕ್ಷಕರೊಬ್ಬರಿಗೆ ಕಳೆದ ಎರಡು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿದೆ. ಅವರು ಪಾಠ ಮಾಡಿದ 84 ಮಕ್ಕಳು ಪ್ರಾಥಮಿಕ ಸಂಪರ್ಕದಲ್ಲಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆಗೆ ವರದಿ ನೀಡಲಾಗಿದ್ದು, ಮಕ್ಕಳ ಕೋವಿಡ್ ಟೆಸ್ಟ್ ಮಾಡಿಸುವ ಸಾಧ್ಯತೆಯಿದೆ.
ಈ ಬಗ್ಗೆ ಈಟಿವಿ ಭಾರತ ಜೊತೆ ಮಾತನಾಡಿದ ಡಿಡಿಪಿಐ ಶ್ರೀನಿವಾಸ ರೆಡ್ಡಿ, ಜಿಲ್ಲೆಯಲ್ಲಿ ಇದುವರೆಗೆ 42 ಶಿಕ್ಷಕರಿಗೆ ಕೊರೊನಾ ಸೊಂಕು ತಗುಲಿದೆ. ಇವರಲ್ಲಿ ಮೂವರು ಶಿಕ್ಷಕರು ಕೋವಿಡ್ಗೆ ಬಲಿಯಾಗಿದ್ದಾರೆ ಅಂತ ಮಾಹಿತಿ ನೀಡಿದ್ದಾರೆ.