ಯಾದಗಿರಿ: ಕೊರೊನಾ ಲಸಿಕಾ ಅಭಿಯಾನಕ್ಕೆ ಯಾದಗಿರಿಯಲ್ಲಿ ಕೂಡ ಚಾಲನೆ ನೀಡಲಾಗಿದೆ. ಯಾದಗಿರಿಯ ನೂತನ ಜಿಲ್ಲಾಸ್ಪತ್ರೆಯ ಲಸಿಕೆ ಕೇಂದ್ರದಲ್ಲಿ ಲಸಿಕಾ ವಿತರಣೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಲಸಿಕಾ ಅಭಿಯಾನಕ್ಕೆ ಶಾಸಕ ವೆಂಕಟರೆಡ್ಡಿ ಮುದ್ನಾಳ ಚಾಲನೆ ನೀಡಿದರು.
ಮೊಟ್ಟಮೊದಲ ಬಾರಿಗೆ ಡಿ ಗ್ರೂಪ್ ನೌಕರ ಅಶೋಕ ಅವರು ಲಸಿಕೆ ಪಡೆದರು. ಕೋವಿಡ್ ಮುಂಜಾಗ್ರತೆ ವಹಿಸಿ ಲಸಿಕೆ ನೀಡಲಾಗಿದೆ. ಫಲಾನುಭವಿಗಳಿಗೆ ಲಸಿಕೆ ನೀಡಿದ ಬಳಿಕ, ಅವರನ್ನು 30 ನಿಮಿಷಗಳ ಕಾಲ ನಿಗಾದಲ್ಲಿಡಲಾಯಿತು. ಬಳಿಕ ಕಳುಹಿಸಲಾಯಿತು.
ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ, ಸಿಇಒ ಶಿಲ್ಪಾ ಶರ್ಮಾ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಲಸಿಕೆ ವಿತರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಯಾದಗಿರಿ ಜಿಲ್ಲೆಯಲ್ಲಿ ಇಂದು 350 ಫಲಾನುಭವಿಗಳಿಗೆ ಲಸಿಕೆ ನೀಡಲಾಗುತ್ತಿದ್ದು, ಜಿಲ್ಲೆಯ 5 ಲಸಿಕೆ ವಿತರಣೆ ಕೇಂದ್ರದಲ್ಲಿ ಲಸಿಕೆ ನೀಡಲಾಗುತ್ತಿದೆ.