ETV Bharat / state

ಕೋವಿಡ್​​ಗೆ ಯಾದಗಿರಿಯಲ್ಲಿ ಕೊರೊನಾ ವಾರಿಯರ್​​ ಬಲಿ: ಸಚಿವ ಶ್ರೀರಾಮುಲು ಸಂತಾಪ

ಕೊರೊನಾ ಸೋಂಕಿಗೆ ಯಾದಗಿರಿ ಜಿಲ್ಲೆಯ ಕೌಳೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ಕೊರೊನಾ ವಾರಿಯರ್​ ಸ್ಟಾಪ್​ ನರ್ಸ್​​​ ಒಬ್ಬರು ಬಲಿಯಾಗಿದ್ದಾರೆ. ಮೃತರ ಕುಟುಂಬಕ್ಕೆ ಟ್ವೀಟ್​​ ಮೂಲಕ ಸಂತಾಪ ಸೂಚಿಸಿರುವ ಆರೋಗ್ಯ ಸಚಿವ ಬಿ.ಶ್ರೀರಾಮುಲು, ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

corona-warriors-died-from-corona-virus-in-yadagiri
ಯಾದಗಿರಿ ಕೊರೊನಾ ವಾರಿಯರ್​​ ಬಲಿ
author img

By

Published : Oct 1, 2020, 3:12 PM IST

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್​​ ಸೋಂಕಿಗೆ ಕೊರೊನಾ ವಾರಿಯರ್​​ ಒಬ್ಬರು ಬಲಿಯಾದ ಘಟನೆ ನಡೆದಿದೆ.

ತಾಲೂಕಿನ ಕೌಳೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ಸ್ಟಾಪ್ ನರ್ಸ್ ಗೀತಾ ಮಹೇಶ್ (32) ಸೋಂಕಿಗೆ ಬಲಿಯಾಗಿದ್ದಾರೆ. ಕಳೆದ 10 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಎಂಟು ದಿನಗಳ ಹಿಂದೆ ಅವರ ಪತಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು.

  • ಯಾದಗಿರಿ ಜಿಲ್ಲೆಯ ಕೌಳೂರಿನಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಗೀತಾ ಅವರು ಇಂದು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಗೀತಾ ಅವರು ಕೋವಿಡ್ ರೋಗಿಗಳ ಸೇವೆಯಲ್ಲಿ ನಿರತರಾಗಿದ್ದರು. ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬಕ್ಕೆ ಈ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. 1/2 pic.twitter.com/mRAzpcHFau

    — B Sriramulu (@sriramulubjp) October 1, 2020 " class="align-text-top noRightClick twitterSection" data=" ">

ದಂಪತಿ ಯಾದಗಿರಿ ನೂತನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಎರಡು ದಿನಗಳ ಹಿಂದೆ ಡಿಸ್ಚಾರ್ಜ್ ಆಗಿದ್ದರು. ಅಸ್ತಮಾದಿಂದ ಬಳಲುತ್ತಿದ್ದ ಗೀತಾ ಅವರನ್ನ ಅನಾರೋಗ್ಯ ನಿಮಿತ್ತ ನಿನ್ನೆ ರಾತ್ರಿ ಮತ್ತೆ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ತೀವ್ರ ಉಸಿರಾಟದ ತೊಂದರೆಯಿಂದ ಇಂದು ಬೆಳಗಿನ ಜಾವ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಕೊರೊನಾ ವಾರಿಯರ್​, ಸ್ಟಾಪ್ ನರ್ಸ್ ಗೀತಾ ಅವರ ಸಾವಿಗೆ ಆರೋಗ್ಯ ಇಲಾಖೆ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ ಸಿಗಬೇಕಾದ ಪರಿಹಾರ ಹಾಗೂ ಸವಲತ್ತುಗಳನ್ನ ಶೀಘ್ರವಾಗಿ ತಲುಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.