ಯಾದಗಿರಿ: ಜಿಲ್ಲೆಯಲ್ಲಿ ಕೊರೊನಾ ಮಹಾಸ್ಫೋಟಗೊಂಡಿದ್ದು ಮತ್ತೆ 120 ಜನರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1288ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಮಹಾರಾಷ್ಟ್ರದಿಂದ ಆಗಮಿಸಿದ ಕೊರೊನಾ ಪಾಸಿಟಿವ್ ಪ್ರಕರಣಗಳ ಜೊತೆಗೆ ಇದೀಗ ಸಾರಿ ಮತ್ತು ಐಎಲ್ಐ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜಿಲ್ಲೆಯ ಜನರನ್ನ ಬೆಚ್ಚಿ ಬೀಳಿಸುವಂತೆ ಮಾಡಿದೆ.
ಇಂದು ಮತ್ತೆ ಜಿಲ್ಲೆಯ 120 ಜನರಿಗೆ ಕೊರೊನಾ ಸೋಂಕು ತಗಲಿದ್ದು, ನಿತ್ಯ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರುತ್ತಿರುವುದರಿಂದ ಜಿಲ್ಲೆಯ ಜನರಲ್ಲಿ ಭೀತಿ ಮುಂದುವರೆದಿದೆ. ಸೋಂಕಿನಿಂದ 11 ಜನ ಗುಣಮುಖಾರಾಗಿದ್ದು, ಒಟ್ಟು ಪ್ರಕರಣಗಳ ಪೈಕಿ 894 ಮಂದಿ ಇದುವರೆಗೂ ಡಿಸ್ಚಾರ್ಜ್ ಆಗಿದ್ದಾರೆ. 393 ಸಕ್ರಿಯ ಪ್ರಕರಣಗಳಿದ್ದು, ಒಬ್ಬರು ಮೃತಪಟ್ಟಿದ್ದಾರೆ.
ಸೋಂಕು ತಗುಲಿದ ಸೋಂಕಿತರನ್ನ ಚಿಕಿತ್ಸೆಗಾಗಿ ಜಿಲ್ಲೆಯ ನಿಗದಿತ ಕೋವಿಡ್ 19 ಆಸ್ಪತ್ರೆಗೆ ದಾಖಲಿಸಲಾಗಿದೆ..