ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರಿನ ಸಬ್ ರಿಜಿಸ್ಟ್ರಾರ್ ಕಚೇರಿಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿಗಳನ್ನು ವಶಪಡಿಸಿಕೊಂಡಿದ್ದಾರೆ.
ಶಹಾಪುರ ಸಬ್ ರೆಜೆಸ್ಟ್ರಾರ್ ಕಚೇರಿಯಲ್ಲಿ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಲಂಚಾವತಾರವನ್ನು ಕಂಡು ದಿಗ್ಭ್ರಮೆಗೊಂಡಿದ್ದಾರೆ. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸರಕಾರದ ಭೂ ಖರೀದಿ ಕಾನೂನು ನಿಯಮಗಳನ್ನು ಉಲ್ಲಂಘಿಸಿ ಕಚೇರಿಯ ಅಧಿಕಾರಿಗಳು ಖರೀದಿ ಮಾರಾಟದ ನೊಂದಾಣಿ ಶುಲ್ಕಕಿಂತ ಹೆಚ್ಚಿನ ಹಣವನ್ನು ಪಡೆದುಕೊಳ್ಳುತ್ತಿದ್ದ ಸಮಯದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಕಚೇರಿಯಲ್ಲಿನ ಪ್ರಭಾರಿ ಸಬ್ ರಿಜಿಸ್ಟ್ರಾರ್, ದಲ್ಲಾಳ್ಳಿ ಹಾಗೂ ದಸ್ತಾವೇಜುದಾರರಿಂದ 78,860 ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ.
ಎಸಿಬಿ ಡಿವೈಎಸ್ಪಿ ಚಂದ್ರಕಾಂತ ಪೂಜಾರಿ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಲಂಚಕೋರ ಅಧಿಕಾರಿಗಳನ್ನು ವಶಕ್ಕೆ ಪಡೆದರು.