ಸುರಪುರ (ಯಾದಗಿರಿ): ಪೊಲೀಸ್ ಇಲಾಖೆ ಹಾಗೂ ಗೃಹ ರಕ್ಷಕ ದಳದ ವತಿಯಿಂದ ನಗರದಲ್ಲಿ ಕೊರೊನಾ ಕುರಿತು ಜಾಗೃತಿ ಅಭಿಯಾನ ನಡೆಸಲಾಯಿತು.
ಈ ಸಂದರ್ಭದಲ್ಲಿ ಸುರಪುರ ಉಪವಿಭಾಗದ ಡಿವೈಎಸ್ಪಿ ವೆಂಕಟೇಶ್ ಹುಗಿಬಂಡಿ ಮಾತನಾಡಿ, ಇಂದು ಎಲ್ಲೆಡೆ ಕೊರೊನಾ ಸೋಂಕು ಹೆಚ್ಚಾಗಲು ಜನರ ನಿರ್ಲಕ್ಷ್ಯ ಕಾರಣವಾಗಿದೆ. ಮುಂದೆ ಪ್ರತಿಯೊಬ್ಬರೂ ಮನೆಯಿಂದ ಹೊರಬರಬೇಕಾದರೆ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಜೊತೆಗೆ ಆಗಾಗ ಕೈಗಳನ್ನು ತೊಳೆಯುವುದನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸುರಪುರ ಠಾಣೆಯ ಇನ್ಸ್ಪೆಕ್ಟರ್ ಎಸ್.ಎಂ.ಪಾಟೀಲ್, ಗೃಹರಕ್ಷಕ ದಳದ ಕಮಾಂಡರ್ ಯಲ್ಲಪ್ಪ ಹುಲಿಕಲ್ ಸೇರಿದಂತೆ ಅನೇಕರು ಇದ್ದರು.