ETV Bharat / state

ಕೋವಿಡ್ ನಿಯಂತ್ರಿಸಲು ವೈದ್ಯರ ಕರ್ತವ್ಯದ ಜೊತೆಗೆ ಸಾರ್ವಜನಿಕರ ಸಹಭಾಗಿತ್ವ ಮುಖ್ಯ : ಜಿಲ್ಲಾಧಿಕಾರಿ - Yadgiri latest news

ಇಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದರು.

DC meeting
DC meeting
author img

By

Published : Sep 2, 2020, 10:36 PM IST

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ವೈದ್ಯಕೀಯ ತಂಡದ ಅಧಿಕಾರಿಗಳು ನಿರ್ವಹಿಸುವ ಕರ್ತವ್ಯದ ಜೊತೆಗೆ ಸಾರ್ವಜನಿಕರ ಸಹಭಾಗಿತ್ವ ಕೂಡ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ರಾಗಪ್ರಿಯಾ ಆರ್. ಅವರು ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಟಾಸ್ಕ್-ಪೋರ್ಸ್ ಸಭೆಯಲ್ಲಿ ಕೋವಿಡ್-19 ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಯಲು ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಸೋಂಕಿನ ಲಕ್ಷಣಗಳ ಕುರಿತು ಆಶಾ ಕಾರ್ಯಕರ್ತೆಯರ ಮೂಲಕ ಪ್ರಚಾರ ಮಾಡಬೇಕು. ಮೈ-ಕೈ ನೋವು, ಸುಸ್ತಾಗುವುದು, ಜ್ವರ, ಕೆಮ್ಮು, ನೆಗಡಿ, ಉಸಿರಾಟದ ತೊಂದರೆಯಂತ ರೋಗದ ಲಕ್ಷಣಗಳು ಕಂಡುಬಂದರೆ ತಕ್ಷಣ ಆಶಾ ಕಾರ್ಯಕರ್ತೆಯರ ಮೂಲಕ ತಮ್ಮ ಹತ್ತಿರದ ಕೋವಿಡ್-19 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಜನರಲ್ಲಿ ಅರಿವು ಮೂಡಿಸಬೇಕು ಎಂದರು.

ಸಾರ್ವಜನಿಕರು ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ/ಟಿಶ್ಯೂ ಪೇಪರನ್ನು ಬಳಸಬೇಕು. ಕೈ ಸ್ವಚ್ಛಗೊಳಿಸುವ ದ್ರಾವಣ ಅಥವಾ ನೀರು ಮತ್ತು ಸೋಪು ಬಳಸಿ ಆಗಾಗ ಕೈಗಳನ್ನು ತೊಳೆದುಕೊಳ್ಳಿ ಮತ್ತು ಸಾಮಾಜಿಕ ಸಮೂಹ ಗುಂಪು ಸೇರುವುದನ್ನು ಮಾಡಬಾರದು ಎಂದು ಸಲಹೆ ನೀಡಿದರು.

ಸಂಪರ್ಕ ಪತ್ತೆ ಹಚ್ಚುವಿಕೆ ತಂಡವು ಕೊರೊನಾ ಪಾಸಿಟಿವ್ ವ್ಯಕ್ತಿಯ ಎಲ್ಲಾ ಸಂಪರ್ಕಗಳನ್ನು ತ್ವರಿತಗತಿಯಲ್ಲಿ ಪತ್ತೆ ಹಚ್ಚಬೇಕು. ಸೋಂಕಿತ ವ್ಯಕ್ತಿಯ ಮೊಬೈಲ್ ಸಂಖ್ಯೆಯನ್ನು ಖಚಿತಪಡಿಸಿಕೊಳ್ಳಬೇಕು. ಸಂಪರ್ಕ ಪತ್ತೆಗೆ ಸಂಬಂಧಿಸಿದ ಮಾಹಿತಿಯನ್ನು ಸಂಬಂಧಪಟ್ಟ ಆ್ಯಪ್ ಅಥವಾ ಸಕಾಲದಲ್ಲಿ ಅಪ್ ಡೇ ಟ್ ಮಾಡಬೇಕು. ಕೋವಿಡ್ ಆರೈಕೆ ಕೇಂದ್ರ (ಸಿಸಿಸಿ) ತಂಡವು ಹಾಸಿಗೆ, ಉಪಕರಣ, ವೈದ್ಯಕೀಯ, ಅರೆ ವೈದ್ಯಕೀಯ ಮತ್ತು ಪೂರಕ ಸಿಬ್ಬಂದಿ, ವಾಹನ ಸೌಲಭ್ಯ, ಆಹಾರ, ಸ್ಯಾನಿಟೈಸೇಷನ್ ಸೇರಿದಂತೆ ಅತ್ಯಗತ್ಯತೆಯನ್ನು ಹೊಂದಿರಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ ಜಿ.ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್. ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಭಗವಂತ ಅನವಾರ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಲಕ್ಷ್ಮಿಕಾಂತ, ಡಾ. ವಿರೇಶ ಜಾಕಾ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಭಾಗವಹಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.