ಯಾದಗಿರಿ: ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಜಿಲ್ಲಾ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಕ್ಕೆ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಭೇಟಿ ನೀಡಿ, ಪರಿಶೀಲಿಸಿದರು.
ಜಿಲ್ಲಾ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು ಅಚ್ಚುಕಟ್ಟಾಗಿಟ್ಟುಕೊಳ್ಳುವಂತೆ ಅವರು ಸೂಚಿಸಿದರು. ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯ ರೋಗ ನಿಯಂತ್ರಣ ಕಚೇರಿಗೆ ಭೇಟಿ ನೀಡಿ, ಸಿ.ಬಿ. ನ್ಯಾಟ್ ಮಷಿನ್ ಕಾರ್ಯನಿರ್ವಹಣೆಯ ಬಗ್ಗೆ ಪರಿಶೀಲನೆ ನಡೆಸಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾರಾಯಣಪ್ಪ, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ಗುರುರಾಜ ಹಿರೇಗೌಡ್ರು ಉಪಸ್ಥಿತರಿದ್ದರು.