ಯಾದಗಿರಿ: ಜಿಲ್ಲೆಯಲ್ಲಿಂದು ಹೊಸದಾಗಿ 20 ಜನರಿಗೆ ಕೊರೊನಾ ಸೋಂಕು ಧೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,074 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಇಂದು 31 ಜನ ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಹೊಂದುವ ಮೂಲಕ ಇಲ್ಲಿಯವರೆಗೆ 9,782 ಮಂದಿ ಗುಣಮುಖರಾಗಿದ್ದಾರೆ. ಕೊರೊನಾ ಸೋಂಕಿನಿಂದ ಇದುವರೆಗೆ ಒಟ್ಟು 61 ಜನ ಜಿಲ್ಲೆಯಲ್ಲಿ ಮೃತಪಟ್ಟಿದ್ದಾರೆ. ಒಟ್ಟು ಕೊರೊನಾ ಪ್ರಕರಣಗಳಲ್ಲಿ 231 ಮಂದಿ ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಣನೀಯವಾಗಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಇಳಿಮುಖವಾಗುತ್ತಿವೆ.
ಕಲಬುರಗಿ ಜಿಲ್ಲೆಯಲ್ಲಿ ಇಂದು ಮತ್ತೆ 32 ಜನರಲ್ಲಿ ಕೊರೊನಾ ವೈರಾಣು ಸೋಂಕು ತಗುಲಿದ್ದು ಈವರೆಗೆ ಜಿಲ್ಲೆಯಲ್ಲಿ 19,695 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಈವರೆಗೆ 19,695 ಜನರು ಹೆಮ್ಮಾರಿ ಕೊರೊನಾಗೆ ತುತ್ತಾಗಿದ್ದು. 302 ಜನ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇನ್ನೂ 35 ಜನ ಸೋಂಕಿನಿಂದ ಗುಣಮುರಾಗಿದ್ದು 496 ಜನ ನಿಗದಿತ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ಇಂದು 122 ಹೊಸದಾಗಿ ಕೊರೊನಾ ಪಾಸಿಟಿವ್ ದೃಢವಾಗಿದೆ. ಇಲ್ಲಿಯವರೆಗೆ 12,581 ಜನರಿಗೆ ಸೋಂಕು ತಗುಲಿದೆ. ಇಂದು ಕೊರೊನಾದಿಂದ 69 ಜನ ಗುಣಮುಖ ರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 11,859 ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 195 ಜನ ಮೃತಪಟ್ಟಿದ್ದಾರೆ.
ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 527 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಇಲ್ಲಿಯವರೆಗೆ 1,43,109 ಜನರ ಮೇಲೆ ನಿಗಾ ಇಡಲಾಗಿದ್ದು, 1,42,506 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 1,27,715 ಜನರ ವರದಿ ನೆಗೆಟಿವ್ ಆಗಿದೆ. 12,581 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 2,215 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯಲ್ಲಿ 54 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 24 ಕೊರೊನಾ ಪ್ರಕರಣಗಳು ಶನಿವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13,106 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 12,800 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 8, ಬಾದಾಮಿ 2, ಬೀಳಗಿ 1, ಹುನಗುಂದ 5, ಮುಧೋಳ 4, ಜಮಖಂಡಿ 4 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 1,315 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ.
ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 1,53,270 ಸ್ಯಾಂಪಲ್‍ಗಳನ್ನು ಪರೀಕ್ಷೀಸಲಾಗಿದ್ದು, ಈ ಪೈಕಿ 1,38,338 ನೆಗಟಿವ್ ಪ್ರಕರಣ, ಹಾಗೂ 131 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 175 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 413 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 162 ಇರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಇಂದು 36 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 13,361 ಕ್ಕೆ ಏರಿಕೆಯಾಗಿದೆ. ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಗಂಗಾವತಿ ತಾಲೂಕಿನಲ್ಲಿ- 19, ಕೊಪ್ಪಳ ತಾಲೂಕಿನಲ್ಲಿ 09, ಕುಷ್ಟಗಿ ತಾಲೂಕಿನಲ್ಲಿ 02 ಯಲಬುರ್ಗಾ ತಾಲೂಕಿನಲ್ಲಿ 06 ಪ್ರಕರಣ ಸೇರಿ ಇಂದು ಒಟ್ಟು 31 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 280 ಜನ ಸೋಂಕಿತರು ಮೃತಪಟ್ಟಿದ್ದಾರೆ.
ಇಂದು 59 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 12,765 ಜನರು ಗುಣಮುಖರಾಗಿದ್ದಾರೆ. 295 ಜನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.