ETV Bharat / state

ಮೂರು ಸೂತ್ರಗಳನ್ನು ಪ್ರತಿಯೊಬ್ಬರೂ ಪಾಲಿಸಿದರೆ ಜಿಲ್ಲೆ ಕೊರೊನಾ ಮುಕ್ತವಾಗುವುದರಲ್ಲಿ ಸಂದೇಹವಿಲ್ಲ: ಡಿಸಿ

author img

By

Published : Jun 29, 2020, 10:28 PM IST

ಯಾದಗಿರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಕೋವಿಡ್-19 ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು, ಸಂಘ-ಸಂಸ್ಥೆಗಳಿಂದ ಸಲಹೆ ಸೂಚನೆಗಳನ್ನು ಕೇಳಲು ಹಮ್ಮಿಕೊಂಡಿದ್ದ ನೇರ ಫೋನ್‌ ಇನ್ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಮಾತನಾಡಿದರು.

Yadagiri
ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್

ಯಾದಗಿರಿ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಸೋಪು ಅಥವಾ ಸ್ಯಾನಿಟೈಸರ್​​ನಿಂದ ಕೈ ತೊಳೆದುಕೊಳ್ಳುವುದು ದಿನನಿತ್ಯದ ರೂಢಿಯಾಗಬೇಕು. ಈ ಮೂರು ಸೂತ್ರಗಳನ್ನು ಪ್ರತಿಯೊಬ್ಬರೂ ಪಾಲಿಸಿದರೆ ಜಿಲ್ಲೆ ಕೊರೊನಾ ಮುಕ್ತವಾಗುವುದರಲ್ಲಿ ಸಂದೇಹವಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಹೇಳಿದರು.

ನೇರ ಫೋನ್‌ ಇನ್ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಕೋವಿಡ್-19 ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು, ಸಂಘ-ಸಂಸ್ಥೆಗಳಿಂದ ಸಲಹೆ ಸೂಚನೆಗಳನ್ನು ಕೇಳಲು ಹಮ್ಮಿಕೊಂಡಿದ್ದ ನೇರ ಫೋನ್‌ ಇನ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾಸ್ಕ್ ಧರಿಸುವ ಬಗ್ಗೆ ಮಾಧ್ಯಮಗಳಲ್ಲಿ ಸಾಕಷ್ಟು ಪ್ರಚಾರ ನೀಡಲಾಗುತ್ತಿದೆ. ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತ್​ಗಳ ವತಿಯಿಂದ ಹಾಗೂ ಸಂಘ-ಸಂಸ್ಥೆಗಳ ವತಿಯಿಂದ ಜಾಗೃತಿ ಮೂಡಿಸಲಾಗುತ್ತಿದೆ. ಈ ಬಗ್ಗೆ ತಿಳಿವಳಿಕೆ ಇದ್ದರೂ ಹೆಚ್ಚಿನ ಜನರು ಮಾಸ್ಕ್ ಧರಿಸುತ್ತಿಲ್ಲ ಎಂದರು.

ಅಗತ್ಯ ಕೆಲಸಕ್ಕಾಗಿ ಮನೆಯಿಂದ ಹೊರಗಡೆ ಬರುವ ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸಬೇಕು. ಬಟ್ಟೆಯಿಂದ ತಯಾರಿಸಿದ ಮಾಸ್ಕ್ ಕೂಡ ಧರಿಸಬಹುದಾಗಿದೆ. ಕರವಸ್ತ್ರ ಅಥವಾ ಇನ್ಯಾವುದೇ ವಸ್ತ್ರವನ್ನು ಮುಖಕ್ಕೆ ಕಟ್ಟಿಕೊಳ್ಳಬಹುದು ಎಂದು ಸಲಹೆ ನೀಡಿದರು. ಜನಜೀವನ ಸುಧಾರಿಸಲು ಸರ್ಕಾರ ಹಂತ ಹಂತವಾಗಿ ಲಾಕ್‍ಡೌನ್ ಸಡಿಲಿಕೆ ಮಾಡುತ್ತಿದೆ. ಕೊರೊನಾ ವೈರಸ್‍ಗೆ ಔಷಧಿ ಕಂಡುಹಿಡಿದಿಲ್ಲ. ಮುಂಜಾಗ್ರತಾ ಕ್ರಮಗಳೇ ವೈರಸ್ ನಿಯಂತ್ರಣಕ್ಕೆ ಸದ್ಯದ ಔಷಧಿಯಾಗಿದೆ ಎಂಬುದನ್ನು ಜನರು ಅರಿತುಕೊಳ್ಳಬೇಕಿದೆ ಎಂದು ಹೇಳಿದರು.

ನೇರ ಪೋನ್-ಇನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧೆಡೆಯಿಂದ 10ಕ್ಕೂ ಹೆಚ್ಚು ಗ್ರಾಮ/ನಗರಗಳಿಂದ ಕರೆಗಳು ಸ್ವೀಕೃತವಾದವು. ಆರೋಗ್ಯ ಕೇಂದ್ರಕ್ಕೆ ವೈದ್ಯರು ಸಮಯಕ್ಕೆ ಸರಿಯಾಗಿ ಬರದಿರುವುದು, ಗುಟ್ಕಾ ಸೇವನೆಗೆ ಕಡಿವಾಣ, ಮಾಸ್ಕ್ ಧರಿಸುವ ಬಗ್ಗೆ ಹೆಚ್ಚಿನ ಪ್ರಚಾರ ಮತ್ತು ದಂಡ ವಿಧಿಸುವುದು ಸೇರಿದಂತೆ ವಿವಿಧ ವಿಷಯಗಳ ಕುರಿತಂತೆ ಕರೆ ಮಾಡಿದ ಸಾರ್ವಜನಿಕರು ಗಮನ ಸೆಳೆದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.