ಸುರಪುರ: ನಗರದ ರಂಗನಪೇಟೆಯ ತೊಯ್ಬಾ ಟ್ರಸ್ಟ್ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಿಸಲಾಯಿತು.
ಮದರಸಾ ಆವರಣದಲ್ಲಿ ನಡೆದ ಕಿಟ್ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೊಯ್ಬಾ ಟ್ರಸ್ಟ್ ಅಧ್ಯಕ್ಷ ಅಸ್ಗರ್ ಹುಸೇನ್ ವಹಿಸಿದ್ದರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪೊಲೀಸ್ ಇನ್ಸ್ಪೆಕ್ಟರ್ ಸಾಹೇಬಗೌಡ ಎಂ.ಪಾಟೀಲ ಮಾತನಾಡಿ, ಕೊರೊನಾ ನಿರ್ಮೂಲನೆಗೆ ಎಲ್ಲರ ಸಹಕಾರ ಅತ್ಯಗತ್ಯ. ಲಾಕ್ ಡೌನ್ ವೇಳೆ ಕಷ್ಟದಲ್ಲಿರುವ ಕುಟುಂಬಗಳನ್ನು ಗುರುತಿಸಿ ತೊಯ್ಬಾ ಟ್ರಸ್ಟ್ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸುತ್ತಿರುವುದು ಶ್ಲಾಘನೀಯ ಎಂದರು.
ಆಯ್ದ ನೂರು ಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಿಸಲಾಯಿತು. ಜನರು ಸರತಿ ಸಾಲಿನಲ್ಲಿ ನಿಂತು ಸಾಮಾಜಿಕ ಅಂತರ ಕಾಯ್ದುಕೊಂಡು ಕಿಟ್ ಪಡೆದರು. ಈ ಸಂದರ್ಭದಲ್ಲಿ ನಗರ ಸಭೆ ಮಾಜಿ ಅಧ್ಯಕ್ಷ ಅಬ್ದುಲ್ ಗಫೂರ್ ನಗನೂರಿ ಹಾಗೂ ಶೇಖ್ ಮಹಿಬೂಬ ಒಂಟಿ ಇದ್ದರು.