ETV Bharat / state

ಯಾದಗಿರಿ: ಪ್ರಧಾನಿ ಮೋದಿ ಆಗಮನ ಹಿನ್ನೆಲೆ.. ಜಿಲ್ಲಾಡಳಿತದಿಂದ ಭರದ ಸಿದ್ಧತೆ - ಪ್ರಧಾನಿ ಮೋದಿ ಆಗಮನ ಹಿನ್ನೆಲೆ

ಜನವರಿ 19ಕ್ಕೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮನ - ವಿವಿಧ ಯೋಜನೆಗಳಿಗೆ ಚಾಲನೆ

modi-program-at-yadagiri
ಯಾದಗಿರಿ : ಪ್ರಧಾನಿ ಮೋದಿ ಆಗಮನ ಹಿನ್ನಲೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
author img

By

Published : Jan 17, 2023, 8:13 PM IST

ಯಾದಗಿರಿ: ಜನವರಿ 19 ರಂದು ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದಲ್ಲಿ ಹೊಸ ಸ್ಕಾಡಾ ತಂತ್ರಜ್ಞಾನದ ಮೂಲಕ ಬಸವಸಾಗರ ಜಲಾಶಯದ ಕಾಲುವೆಯ ಗೇಟ್ ಗಳನ್ನು ಕಂಟ್ರೋಲ್ ರೂಂ ಮೂಲಕ ನಿಯಂತ್ರಿಸುವ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ ಇತರ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಪ್ರಧಾನಿ ಕಾರ್ಯಕ್ರಮ ಸಂಬಂಧ ಕೊಡೇಕಲ್ ಹೊರವಲಯದ ಹುಣಸಗಿ ನಾರಾಯಣಪುರ ರಾಜ್ಯ ಹೆದ್ದಾರಿಯ ಪಕ್ಕದಲ್ಲಿ ಜಿಲ್ಲಾಡಳಿತ ವತಿಯಿಂದ ಬೃಹತ್ ವೇದಿಕೆ ನಿರ್ಮಾಣದ ಕೆಲಸ ಭರದಿಂದ ಸಾಗುತ್ತಿದೆ. ಭದ್ರತಾ ದೃಷ್ಟಿಯಿಂದ ವಿಶೇಷ ಭದ್ರತಾ ಪಡೆಯವರು (ಎಸ್.ಪಿ.ಜಿ) ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಇನ್ನು ಪ್ರಧಾನಿ ಮೋದಿಯವರು ಭಾಗವಹಿಸುವಲ್ಲಿ ಹೊಸ ತಂತ್ರಜ್ಞಾನದ ಚಪ್ಪರ ಮತ್ತು ಬೃಹತ್​ ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರಿಗೆ ಮತ್ತು ಸಾರ್ವಜನಿಕರಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಊಟ, ಉಪಹಾರ, ಪಾರ್ಕಿಂಗ್‌ ಹಾಗೂ ಇನ್ನಿತರ ಸೌಕರ್ಯಗಳನ್ನು ಮಾಡಲಾಗುತ್ತಿದೆ.

ಎಸ್‌ಪಿಜಿ ಭದ್ರತೆ : ಪ್ರಧಾನಿ ನರೇಂದ್ರ ಮೋದಿಯವರಿಗೆ ಎಸ್‌ಪಿಜಿ ಭದ್ರತೆ ಒದಗಿಸಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಯಾವುದೇ ಭದ್ರತಾ ಲೋಪ ಉಂಟಾಗದಂತೆ ನೋಡಿಕೊಳ್ಳಲಾಗುತ್ತಿದೆ. ಭದ್ರತೆ ದೃಷ್ಟಿಯಿಂದ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತಿದೆ.

ಪ್ರಧಾನಿಗಳ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡುವ ರೀತಿಯಲ್ಲಿ ಸಕಲ ಸಿದ್ದತೆಗಳನ್ನು ಮಾಡಲಾಗುತ್ತಿದೆ. ಸಾರ್ವಜನಿಕರಿಗೆ ಸೂಕ್ತ ಪಾರ್ಕಿಂಗ್​ ವ್ಯವಸ್ಥೆ, ಕಾರ್ಯಕ್ರಮ ಮುಗಿದ ಬಳಿಕ ಸುರಕ್ಷಿತವಾಗಿ ಮನೆಗೆ ತಲುಪಲು ಬೇಕಾದ ರೀತಿಯಲ್ಲಿ ಸಂಚಾರ ಬದಲಾವಣೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕಾರ್ಯಕ್ರಮದ ಸ್ಥಳದಲ್ಲಿ ಸಾರ್ವಜನಿಕರಿಗಾಗಿ ಮೊಬೈಲ್ ಶೌಚಾಲಯ ವ್ಯವಸ್ಥೆ ಮಾಡಲಾಗುತ್ತಿದೆ. ಸಾರ್ವಜನಿಕರ ಆರೋಗ್ಯ ಸುರಕ್ಷತೆಗಾಗಿ ಆಂಬ್ಯುಲೆನ್ಸ್ ವ್ಯವಸ್ಥೆಯನ್ನು ಮಾಡಲಾಗುತ್ತದೆ. ತುರ್ತು ಆರೋಗ್ಯ ಚಿಕಿತ್ಸಾ ವ್ಯವಸ್ಥೆಗೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ಹಾಗೂ ಇನ್ನಿತರ ಗಣ್ಯರು ಆಗಮಿಸುತ್ತಿರುವ ಹಿನ್ನಲೆ ಹೆಲಿಪ್ಯಾಡ್ ಗಳನ್ನು ನಿರ್ಮಿಸಲಾಗುತ್ತಿದೆ. ಜಿಲ್ಲಾಡಳಿತ ಪ್ರಧಾನಿ ಕಾರ್ಯಕ್ರಮ ಸಿದ್ಧತೆಯನ್ನು ಭರದಿಂದ ನಡೆಸುತ್ತಿದೆ.

ಹುಬ್ಬಳ್ಳಿಯಲ್ಲಿ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿದ್ದ ಮೋದಿ : ಕಳೆದ ಜನವರಿ 12ರಂದು ಹುಬ್ಬಳ್ಳಿಯ ರೈಲ್ವೇ ಮೈದಾನದಲ್ಲಿ ಹಮ್ಮಿಕೊಂಡಿದ್ದ 26ನೇ ರಾಷ್ಟ್ರೀಯ ಯುವಜನೋತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು. ಸ್ವಾಮಿ ವಿವೇಕಾನಂದರ ಜನ್ಮದಿನದ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತವು ಯುವಕರನ್ನು ಹೊಂದಿರುವ ರಾಷ್ಟ್ರವಾಗಿದೆ. ಭಾರತ ಯುವಕರ ದೇಶ. ಭಾರತೀಯ ಯುವಕರ ಪ್ರತಿಭೆಯನ್ನು ಕಂಡು ಇಡೀ ಜಗತ್ತು ಬೆರಗಾಗುತ್ತಿದೆ. ಜೊತೆಗೆ ಭಾರತೀಯ ಹೆಣ್ಣುಮಕ್ಕಳು ಎಲ್ಲ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಫು ಮೂಡಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು.

ಯುವಕರಿಗೆ ಸ್ವಾಮಿ ವಿವೇಕಾನಂದರು ಪ್ರೇರಣಾದಾಯಿ ವ್ಯಕ್ತಿಯಾಗಿದ್ದಾರೆ. ಏಳಿ, ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲಬೇಡಿ ಎಂದು ವಿವೇಕಾನಂದರು ಯುವಜನರಿಗೆ ಕರೆ ನೀಡಿದ್ದಾರೆ. ಯುವ ಶಕ್ತಿಯಿಂದ ದೇಶದ ಭವಿಷ್ಯ ನಿರ್ಮಾಣ ಸಾಧ್ಯವಾಗುತ್ತದೆ. ದೇಶದ ಅಮೃತ ಕಾಲದ ಸಂದರ್ಭದಲ್ಲಿ ನಮ್ಮ ಕರ್ತವ್ಯಗಳನ್ನು ಅರ್ಥಮಾಡಿಕೊಳ್ಳಬೇಕು. ನಮ್ಮ ರಾಷ್ಟ್ರವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ಹೇಳಿದ್ದರು.

ಇದನ್ನೂ ಓದಿ : ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನೆ: ಯುವ ಶಕ್ತಿ ಬಗ್ಗೆ ಪ್ರಧಾನಿ ಮೋದಿ ಗುಣಗಾನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.