ETV Bharat / state

ಯಾದಗಿರಿ: ಏಕಲವ್ಯ ಕೋವಿಡ್ ಕೇರ್ ಆಸ್ಪತ್ರೆಗೆ ಡಿಸಿ ಭೇಟಿ - District Collector visited Covid Care Hospital

ಯಾದಗಿರಿ ಜಿಲ್ಲೆಯ ಬಂದಳ್ಳಿಯಲ್ಲಿರುವ ಏಕಲವ್ಯ ಕೋವಿಡ್ ಕೇರ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಎಂ. ಕೂರ್ಮಾ ರಾವ್ ಅವರು ಭಾನುವಾರ ಭೇಟಿ ನೀಡಿ, ವೈದ್ಯರ ಹಾಜರಾತಿ, ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಪರಿಶೀಲನೆ ನಡೆಸಿದರು.

Covid Care Hospital
ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್
author img

By

Published : Jul 26, 2020, 11:41 PM IST

ಯಾದಗಿರಿ: ಜಿಲ್ಲೆಯ ಬಂದಳ್ಳಿಯಲ್ಲಿರುವ ಏಕಲವ್ಯ ಕೋವಿಡ್ ಕೇರ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಎಂ. ಕೂರ್ಮಾ ರಾವ್ ಅವರು ಭಾನುವಾರ ಭೇಟಿ ನೀಡಿ, ರೋಗಿಗಳ ಜೊತೆ ಸಮಾಲೋಚನೆ ನಡೆಸಿದರು.

ವೈದ್ಯರ ಹಾಜರಾತಿ, ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ರೋಗಿಗಳಿಗೆ ನೀಡಲಾಗುತ್ತಿರುವ ಉಪಹಾರ, ಊಟದ ಕುರಿತು ಹಾಗೂ ವೈದ್ಯರ ಸರಿಯಾದ ಸಮಯಕ್ಕೆ ಹಾಜರಾಗಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವುದರ ಬಗ್ಗೆ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಪ್ರಭಾರಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಎಸ್. ಸೋಮನಾಳ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಯಾದಗಿರಿ ನಗರಸಭೆ ಪ್ರಭಾರ ಪೌರಾಯುಕ್ತ ಬಕ್ಕಪ್ಪ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.