ETV Bharat / state

ಗುರುಮಠಕಲ್ ತಾಲೂಕಿನಲ್ಲಿ ವಿವಿಧೆಡೆ ಶಾಲೆ, ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ - district collector visits community health institutions

ಗುರುಮಠಕಲ್ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಭೇಟಿ ನೀಡಿದರು. ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗೆ ಅವಶ್ಯವಿರುವ ಪಿ.ಪಿ.ಇ ಕಿಟ್, ಮಾಸ್ಕ್, ಸ್ಯಾನಿಟೈಸರ್, ಗ್ಲೌಸ್ ಕೊರತೆಯಾಗದಂತೆ ಕ್ರಮವಹಿಸಬೇಕು ಎಂದು ಅವರು ಸೂಚನೆ ನೀಡಿದರು.

gurumatakal
ಗುರುಮಠಕಲ್
author img

By

Published : Jun 15, 2020, 10:52 PM IST

ಗುರುಮಠಕಲ್‌ (ಯಾದಗಿರಿ): ಕಂದಕೂರು ಪ್ರಾಥಮಿಕ ಆರೊಗ್ಯ ಕೇಂದ್ರ ಹಾಗೂ ಗುರುಮಠಕಲ್ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಸೋಮವಾರ ಭೇಟಿ ನೀಡಿದ ಅವರು, ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗೆ ಅವಶ್ಯವಿರುವ ಪಿ.ಪಿ.ಇ ಕಿಟ್, ಮಾಸ್ಕ್, ಸ್ಯಾನಿಟೈಸರ್, ಗ್ಲೌಸ್ ಕೊರತೆಯಾಗದಂತೆ ಕ್ರಮವಹಿಸಬೇಕು. ಆಸ್ಪತ್ರೆಗೆ ಬರುವ ರೋಗಿಗಳು, ಆಸ್ಪತ್ರೆ ಸಿಬ್ಬಂದಿ ಹಾಗೂ ಆಸ್ಪತ್ರೆಗೆ ಪ್ರವೇಶಿಸುವ ಪ್ರತಿಯೊಬ್ಬರನ್ನು ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ ಮಾಡುವಂತೆ ಸೂಚನೆ ನೀಡಿದರು.

ಈ ಕುರಿತಂತೆ ಬೇಡಿಕೆಯಿದ್ದರೆ ತಕ್ಷಣವೇ ಮೇಲಧಿಕಾರಿಗಳ ಗಮನಕ್ಕೆ ತನ್ನಿ. ಆಸ್ಪತ್ರೆಯಲ್ಲಿ ಸ್ವಚ್ಛತೆಯನ್ನು ಕಾಪಾಡಲು ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬರುವ ಜೂನ್ 25 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜರುಗಲಿರುವುದರಿಂದ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಯಾದಗಿರಿ ಜಿಲ್ಲೆಯ ರಾಮಸಮುದ್ರ ಹಾಗೂ ಕಂದಕೂರು ಸರ್ಕಾರಿ ಪ್ರೌಢಶಾಲಾ ಪರೀಕ್ಷಾ ಕೇಂದ್ರಗಳಿಗೆ ಸೋಮವಾರ ಭೇಟಿ ನೀಡಿ, ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.

ಶಾಲೆಗಳನ್ನು ಸಂಪೂರ್ಣವಾಗಿ ಸ್ಯಾನಿಟೈಸರ್ ಮಾಡಬೇಕು. ಶಾಲಾ ಕೋಣೆ ಮತ್ತು ಆವರಣವನ್ನು ಸ್ವಚ್ಛಗೊಳಿಸಬೇಕು. ಡೆಸ್ಕ್ ಸುವ್ಯವಸ್ಥೆ ಹಾಗೂ ಡೆಸ್ಕ್‌ಗಳನ್ನು ಹಾಕುವಲ್ಲಿ ಸಾಮಾಜಿಕ ಅಂತರ ಕಾಪಾಡಬೇಕು. ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಮತ್ತು ಶಾಲೆಯಲ್ಲಿನ ಇನ್ನಿತರೆ ಮೂಲಭೂತ ಸೌಕರ್ಯಗಳ ಪರಿಶೀಲನೆ ಕೈಗೊಂಡ ಅವರು, ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅರಕೇರಾ ಆರ್.ಎಂ.ಎಸ್.ಎ ಹಾಗೂ ಗುಂಜನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ತೆರಳಿ ಪರಿಶೀಲನೆ ಮಾಡಿದರು.

ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಲು ಮತ್ತು ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಯಾದಗಿರಿ ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ ಪ್ರತಿ ಒಂದು ಮಿಲಿಯನ್ ಜನಸಂಖ್ಯೆಗಳ ಪೈಕಿ 7,297 ಕೋವಿಡ್ ಟೆಸ್ಟ್‌ಗಳನ್ನು ಮಾಡಲಾಗಿದ್ದು, ಇದು ರಾಜ್ಯದಲ್ಲಿಯೇ ಅತೀ ಹೆಚ್ಚು ಟೆಸ್ಟ್‌ಗಳನ್ನು ಕೈಗೊಂಡ ಜಿಲ್ಲೆಯಾಗಿದೆ. ಜ್ವರದ ಲಕ್ಷಣ ಹಾಗೂ ತೀವ್ರ ಉಸಿರಾಟದ ಸೋಂಕಿನಂತಹ ಲಕ್ಷಣಗಳನ್ನು ಹೊಂದಿರುವ ಸಾರ್ವಜನಿಕರು ಕಡ್ಡಾಯವಾಗಿ ಆರೋಗ್ಯ ತಂಡವನ್ನು ಸಂಪರ್ಕಿಸಿ ಸ್ವಾಬ್ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು.ಎಲ್ಲ ಸಾರ್ವಜನಿಕರು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮುಖಗವಸು ಧರಿಸಬೇಕು. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಮತ್ತು ಸ್ಯಾನಿಟೈಸರ್ ಬಳಸಬೇಕು. ಪ್ರತಿಯೊಬ್ಬರೂ ಕಡ್ಡಾಯವಾಗಿ ಗೂಗಲ್ ಪ್ಲೇಸ್ಟೋರ್‌ನಿಂದ ಆರೋಗ್ಯ ಸೇತು ಆ್ಯಪ್‌ನ್ನು ಇನ್‌ಸ್ಟಾಲ್ ಮಾಡಿಕೊಳ್ಳುವಂತೆ ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ ಚನ್ನಮಲ್ಲಪ್ಪ ಘಂಟಿ, ಸಂಗಮೇಶ ಜಿಡಗೆ, ತಾಲ್ಲೂಕು ವೈದ್ಯಾಧಿಕಾರಿ ಡಾ.ಹಣಮಂತರೆಡ್ಡಿ, ಪುರಸಭೆ ಮುಖ್ಯಾಧಿಕಾರಿ ಜೀವನ ಕುಮಾರ ಕಟ್ಟಿಮನಿ, ಪಿಎಸ್‌ಐ ಶೀಲಾದೇವಿ ನ್ಯಾಮಾನ್, ಡಾ. ಶಿವು ಪ್ರಸಾದ ಮೈತ್ರಿ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.