ಯಾದಗಿರಿ: ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಕಂದಕೂರ ಮತ್ತು ಚಿಂತನಹಳ್ಳಿ ಗ್ರಾಮಗಳ ನ್ಯಾಯಬೆಲೆ ಅಂಗಡಿಗಳಿಗೆ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಭೇಟಿ ನೀಡಿ, ಪಡಿತರ ಆಹಾರ ಧಾನ್ಯ ವಿತರಿಸುತ್ತಿರುವ ಬಗ್ಗೆ ಪರಿಶೀಲಿಸಿದರು.
ಕೋವಿಡ್-19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ. ನಿಗದಿತ ಸಮಯದೊಳಗೆ ಏಪ್ರಿಲ್ ಮತ್ತು ಮೇ 2 ತಿಂಗಳುಗಳ ಆಹಾರ ಧಾನ್ಯವನ್ನು ಪೂರ್ಣ ಪ್ರಮಾಣದಲ್ಲಿ ವಿತರಣೆ ಮಾಡಬೇಕಾಗಿರುತ್ತದೆ. ಆದರೆ, ಪಡಿತರ ಆಹಾರ ಧಾನ್ಯ ವಿತರಣೆ ಆಗದೆ ಇರುವುದರಿಂದ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಿಗೆ ವಿವರಣೆ ಕೇಳಿ ನೋಟಿಸ್ ಜಾರಿ ಮಾಡಿರುತ್ತಾರೆ.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದರು. ಕೋವಿಡ್-19 ಸಂಬಂಧ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಮನೆ ಮನೆ ಸರ್ವೇಯನ್ನು ಪರಿಶೀಲಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಎಸ್.ಪಾಟೀಲ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಿವೇಕಾನಂದ ಟೆಂಗೆ, ತಹಶೀಲ್ದಾರ್ ಸಂಗಮೇಶ ಜಿಡಗೆ ಇದ್ದರು.