ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ, ವೈದ್ಯರು ಆಸ್ಪತ್ರೆಗೆ ಬರುತ್ತಿಲ್ಲ ಎನ್ನುವ ವಿಚಾರವಾಗಿ, ಸಮಸ್ಯೆ ಬಗೆಹರಿಸಲು ಸೂಚಿಸಿದ್ದೇನೆ ಎಂದು ಸಚಿವ ಪ್ರಭು ಚೌವ್ಹಾಣ್ ಹೇಳಿಕೆ ನೀಡಿದ್ದಾರೆ.
ಜಿಲ್ಲೆಗೆ ಇಂದು ಭೇಟಿ ನೀಡಿದ ವೇಳೆ ಹಜ್ ಮತ್ತು ವಕ್ಫ್, ಪಶುಸಂಗೋಪನೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌವ್ಹಾಣ್ ಮಾಧ್ಯಮದವರೊಂದಿಗೆ ಮಾತನಾಡಿ, ಕೊರೊನಾ ತಡೆಗಟ್ಟಲು ಜಿಲ್ಲೆಗೆ ಸರ್ಕಾರ ನೆರವು ನೀಡಿದೆ. ಕೊರೊನಾ ತಡೆಗಟ್ಟಲು ಗ್ರಾಮ, ತಾಲೂಕು ಮಟ್ಟದಲ್ಲಿ ಕೆಲಸ ಮಾಡಿಸಲಾಗ್ತಿದೆ ಎಂದು ತಿಳಿಸಿದರು.
ಗ್ರಾಮ, ತಾಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗಿದೆ, ಕೊರೊನಾ ನಿಯಂತ್ರಣ ಮಾಡಲು ಕೆಲಸವನ್ನು ಜಿಲ್ಲಾದ್ಯಂತ ಹಂಚುವ ಮೂಲಕ ಕೆಲಸ ನಡೆಯುತ್ತಿದೆ ಎಂದು ಹೇಳಿದರು.
ಇನ್ನು ಜಿಲ್ಲೆಗೆ ಭೇಟಿ ನೀಡಲು ವಿಳಂಬ ಮಾಡಿದ ವಿಚಾರವಾಗಿ ಮಾತನಾಡಿದ ಅವರು, ಕ್ವಾರಂಟೈನ್ನಲ್ಲಿ ಇದ್ದ ಕಾರಣ ಬರಲು ತಡವಾಗಿತ್ತು. ಮುಂದಿನ ದಿನಗಳಲ್ಲಿ ತಿಂಗಳ ಒಳಗೆ ಬರಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.