ETV Bharat / state

ಕೃಷಿ ಉತ್ಪನ್ನಗಳ ರಾಶಿ ಮಾಡುವಂತೆ ರೈತರಲ್ಲಿ ಅರಿವು ಮೂಡಿಸಬೇಕು: ಶಿಲ್ಪಾ ಶರ್ಮಾ

ಇಂದು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಕೃಷಿ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

Meeting
Meeting
author img

By

Published : Sep 24, 2020, 10:20 PM IST

ಯಾದಗಿರಿ: ರೈತರು ರಸ್ತೆ ಬದಿಯಲ್ಲಿ ರಾಶಿ ಮಾಡುವುದನ್ನು ತಪ್ಪಿಸಿ, ವೈಜ್ಞಾನಿಕ ಕೃಷಿ ಯಂತ್ರಧಾರೆಯ ಉಪಕರಣಗಳನ್ನು ಬಳಸುವ ಮೂಲಕ ಕೃಷಿ ಉತ್ಪನ್ನಗಳ ರಾಶಿ ಮಾಡುವಂತೆ ರೈತರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 2020 - 21 ಸಾಲಿನ ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ, ಕೃಷಿ ಯಂತ್ರದಾರೆ ಹಾಗೂ ತಂತ್ರಜ್ಞಾನ ರಾಷ್ಟ್ರೀಯ ಮಿಷನ್ ಆತ್ಮ ಯೋಜನೆಯ ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೃಷಿ ಯಂತ್ರಧಾರೆ ಮೂಲಕ ಹೋಬಳಿ ಮಟ್ಟದಲ್ಲಿ ಚಾರಿಟಬಲ್ ಟ್ರಸ್ಟ್, ಸರ್ಕಾರೇತರ ಸಂಸ್ಥೆಗಳು, ಯಂತ್ರೋಪಕರಣಗಳ ಉತ್ಪಾದಕ ಸಂಸ್ಥೆಗಳ ಸಹಭಾಗಿತ್ವದಲ್ಲಿ ಸ್ಥಾಪನೆ ಮಾಡಿ ಸ್ಥಳೀಯ ಬೆಳೆಗಳಿಗೆ ಅನುಗುಣವಾಗಿ ಹಾಗೂ ರೈತರಿಂದ ಬೇಡಿಕೆ ಇರುವ ಯಂತ್ರೋಪಕರಣಗಳಿಗೆ ಜಿಲ್ಲಾ ಮಟ್ಟದ ಸಮಿತಿಯಿಂದ ಅನಮೋದನೆ ಪಡೆದು ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ದಾಸ್ತಾನು ಮಾಡಬೇಕು. ರೈತರಿಗೆ ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಪೂರಕವಾಗುವಂತೆ ಕಡಿಮೆ ಬಾಡಿಗೆ ದರದಲ್ಲಿ ಭೂಮಿ ಸಿದ್ಧತೆಯಿಂದ ಕೊಯ್ಲು ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆಗೆ ಉಪಯುಕ್ತವಾಗುವ ವಿವಿಧ ರೀತಿಯ ಕೃಷಿ ಯಂತ್ರೋಪಕರಣಗಳನ್ನು ನೀಡುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಈ ಕೃಷಿ ಯಂತ್ರಧಾರೆಯ ಯೋಜನೆಯಲ್ಲಿ ರೈತರಿಗೆ ಬೆಳೆ ಕಟಾವು ಮಾಡುವುದಕ್ಕಾಗಿ ಭರಿಸುವ ಕೂಲಿ ಉಳಿತಾಯ ಮಾಡುವುದರ ಜೊತೆಗೆ ಸಮಯ ಉಳಿತಾಯ ಮಾಡಬಹುದು. ಇದರಿಂದ ಕೃಷಿ ಚಟುವಟಿಕೆಗೆ ಮಾಡುವ ಅನಾವಶ್ಯಕ ವೆಚ್ಚ ಕಡಿಮೆಯಾಗುತ್ತದೆ ಎಂದು ಹೇಳಿದರು.

ಮುಖ್ಯವಾಗಿ ಕೃಷಿ ಇಲಾಖೆ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ರೈತರ ಸಮಸ್ಯೆಗಳನ್ನು ಆಲಿಸಿ ಅವರ ಸಮಸ್ಯೆಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರಾದ ದೇವಿಕಾ ಆರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಮಲ್ಲಿಕಾರ್ಜುನ ಬಾಬು, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮಹೇಶ, ಕವಡಿಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಡಾ. ಉಮೇಶ, ತೋಟಗಾರಿಕೆ ವಿಸ್ತರಣಾ ಘಟಕದ ಮುಖ್ಯಸ್ಥರಾದ ಡಾ. ರೇವಣಪ್ಪ, ಕೃಷಿ ಇಲಾಖೆಯ ಉಪ ಕೃಷಿ ನಿರ್ದೇಶಕರಾದ ಡಾ. ಬಾಲರಾಜ, ರೇಷ್ಮೆ ಇಲಾಖೆಯ ಅಧಿಕಾರಿಗಳಾದ ಡಾ. ರಾಜಕುಮಾರ. ಡಾ. ಮೆಹೆಬೂಬಸಾಬ್​ ಸೇರಿದಂತೆ ತಾಲೂಕಿನ ಕೃಷಿ ಇಲಾಖೆ ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು, ಕೃಷಿ ಯಂತ್ರೋಪಕರಣಗಳ ಉತ್ಪಾದಕ ಸಂಸ್ಥೆಗಳ ಪ್ರತಿನಿಧಿಗಳು, ಪ್ರಗತಿಪರ ರೈತರು ಹಾಜರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.