ಯಾದಗಿರಿ : ಮದ್ಯದ ಅಮಲಿನಲ್ಲಿ ವ್ಯಕ್ತಿಗಳಿಬ್ಬರು ಜಗಳವಾಡಿಕೊಂಡ ಸಂದರ್ಭ ಬಿಡಿಸಲು ಹೋದಾಗ ಅದರಲೊಬ್ಬ ವ್ಯಕ್ತಿ ಸಾರ್ವಜನಿಕರ ಮೇಲೆ ಕಲ್ಲು ತೂರಾಟ ನಡೆಸಿದ್ದಾನೆ. ಈ ವೇಳೆ ಕೋಪಗೊಂಡ ಜನರು ವ್ಯಕ್ತಿಗೆ ಥಳಿಸಿರುವ ಘಟನೆ ಜಿಲ್ಲೆಯ ಸುರಪೂರ ತಾಲೂಕಿನಲ್ಲಿ ನಡೆದಿದೆ.
ನಗರದ ವೆಂಕಟಪ್ಪ ನಾಯಕ ವೃತ್ತದಲ್ಲಿ ಮದ್ಯದ ನಶೆಯಲ್ಲಿ ಇಬ್ಬರು ವ್ಯಕ್ತಿಗಳು ಪರಸ್ಪರ ಜಗಳವಾಡುತ್ತಿದ್ದರು. ಜಗಳ ವಿಕೋಪಕ್ಕೆ ತಿರುಗಿ ಪರಸ್ಪರ ಒಬ್ಬರಿಗೊಬ್ಬರು ಬಡಿದಾಡಿಕೊಂಡಿದ್ದು, ಅದರಲೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದಾನೆ. ಘಟನೆಯಲ್ಲಿ ರಕ್ತಸ್ರಾವದಿಂದ ಬಳಲುತ್ತಿದ್ದ ವ್ಯಕ್ತಿ ಏಕಾಏಕಿ ಸಾರ್ವಜನಿಕರ ಮೇಲೆ ಮನಬಂದಂತೆ ಕಲ್ಲು ತೂರಾಟ ನಡೆಸಿದ್ದಾನೆ. ಈ ವೇಳೆ ಕೋಪಗೊಂಡ ಸಾರ್ವಜನಿಕರು ವ್ಯಕ್ತಿಗೆ ಗೂಸಾ ನೀಡಿದ್ದಾರೆ.
ಗಾಯಾಳುವನ್ನು ನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಸುರಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.