ಯಾದಗಿರಿ: ಹೈದರಾಬಾದ್ನಲ್ಲಿ ನಡೆದಿದ್ದ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಎನ್ಕೌಂಟರ್ ಮಾಡಿರುವುದಕ್ಕೆ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ವಿದ್ಯಾರ್ಥಿಗಳಿಂದ ವಿಜಯೋತ್ಸವ ಆಚರಿಸಲಾಯಿತು.
ನಗರದ ಬಸವೇಶ್ವರ ವೃತ್ತದಲ್ಲಿ ಶಾಲಾ ವಿದ್ಯಾರ್ಥಿನಿಯರು ಮತ್ತು ನಾಗರಿಕ ವೇದಿಕೆ ವತಿಯಿಂದ ಸಿಹಿ ಹಂಚಿ ಸಂಭ್ರಮ ಆಚರಿಸಲಾಯಿತು. ಅತ್ಯಾಚಾರಿಗಳಿಗೆ ಪೊಲೀಸರು ಎನ್ಕೌಂಟರ್ ಮಾಡುವ ಮೂಲಕ ತಕ್ಕ ಶಿಕ್ಷೆ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ಮುಂದೆ ಸರ್ಕಾರ ಎಚ್ಚೆತ್ತುಕೊಂಡು ಮಹಿಳೆಯರ ಮೇಲಾಗುವ ದೌರ್ಜನ್ಯ, ಅತ್ಯಾಚಾರವನ್ನು ತಡೆಗಟ್ಟಲು ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ರು.