ಯಾದಗಿರಿ : ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗೂಡರ ಗ್ರಾಮದಲ್ಲಿ ನಡೆದಿದೆ.
ಈರಪ್ಪ ಕನಕಗಿರಿ( 49) ಆತ್ಮಹತ್ಯೆ ಮಾಡಿಕೊಂಡ ರೈತ. ಖಾಸಗಿ ಹಾಗೂ ಸರಕಾರಿ ಬ್ಯಾಂಕಿನಿಂದ ಸಾಲವನ್ನು ಪಡೆದುಕೊಂಡಿದ್ದ ಈರಪ್ಪ ಸಾಲ ತೀರಿಸಲಾಗದೆ ಮನೆಯಲ್ಲಿ ವಿಷವನ್ನು ಸೇವಿಸಿದ್ದಾನೆಂದು ಪೊಲೀಸರು ಶಂಕಿಸಿದ್ದಾರೆ.
ಸದ್ಯ ಈ ಪ್ರಕರಣ ಶಹಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.