ಯಾದಗಿರಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ್ದ ರೈಲು ತಡೆಯ ಅಂಗವಾಗಿ ನಗರದಲ್ಲೂ ರೈತ ಸಂಘದ ಪದಾಧಿಕಾರಿಗಳು ರೈಲು ತಡೆಗೆ ಯತ್ನಿಸಿದರು.
ರೈತ, ಕಾರ್ಮಿಕ, ದಲಿತ ಸಂಯುಕ್ತ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ನಗರದ ಶಾಸ್ತ್ರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದವು. ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗುತ್ತ ಮೆರವಣಿಗೆ ಮೂಲಕ ರೈಲು ನಿಲ್ದಾಣಕ್ಕೆ ತೆರಳಿ ರೈಲು ತಡೆಗೆ ಪ್ರಯತ್ನಿಸಿದರು. ನಿಲ್ದಾಣದೊಳಗೆ ನುಗ್ಗುತ್ತಿದ್ದ ಸಂಘಟನಾಕಾರರನ್ನ ಪೊಲೀಸರು ತಡೆಯಲು ಪ್ರಯತ್ನಿಸಿದಾಗ ವಾಗ್ವಾದ ನಡೆಯಿತು.
ಓದಿ: ಬಜೆಟ್ನಲ್ಲಿ ಬೀದರ್, ಯಾದಗಿರಿ ಅಭಿವೃದ್ಧಿಗೆ ಆದ್ಯತೆ ನೀಡಿ: ಶಾಸಕ, ಸಂಸದರಿಂದ ಸಿಎಂಗೆ ಮನವಿ
ಈ ಸಂದರ್ಭದಲ್ಲಿ 20 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಅರೆಸ್ಟ್ ಮಾಡಿದ ಪೊಲೀಸರು, ರೈಲ್ವೆ ನಿಲ್ದಾಣದೊಳಗೆ ಹೋಗದಂತೆ ತಡೆದರು. ಈ ವೇಳೆ ಕೋಪಗೊಂಡ ಪ್ರತಿಭಟನಾಕಾರರು ಕೂಡಲೇ ಕೇಂದ್ರ ಸರ್ಕಾರ ಕೃಷಿ ಕಾಯ್ದೆ ವಾಪಸ್ ಪಡೆಯಬೇಕು, ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.