ETV Bharat / state

ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಬಿಸಿಲುನಾಡಿನ ಗವಿ ಸಿದ್ಧಲಿಂಗೇಶ್ವರ ಜಲಪಾತ

ಯಾದಗಿರಿ ಜಿಲ್ಲಾ ಕೇಂದ್ರದಿಂದ ಕೇವಲ 35 ಕಿಲೋ ಮೀಟರ್​ ದೂರದಲ್ಲಿರುವ ಹಾಗೂ ಎಲ್ಲ ಋತುವಿನಲ್ಲೂ ಧುಮ್ಮಿಕ್ಕಿ ಹರಿಯುವ ಗವಿ ಸಿದ್ಧಲಿಂಗೇಶ್ವರ ಜಲಪಾತ ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಕರೆಯುತ್ತಿದೆ.

gavi-siddhalingeswara-falls-attracting-tourist
ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಬಿಸಿಲುನಾಡಿನ ಗವಿ ಸಿದ್ಧಲಿಂಗೇಶ್ವರ ಜಲಪಾತ
author img

By

Published : Oct 29, 2020, 4:42 PM IST

ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಿಂತನಹಳ್ಳಿ ಬಳಿ ಪ್ರಕೃತಿ ಮಾತೆಯ ಮಡಿಲಲ್ಲಿರುವ ಗವಿ ಸಿದ್ಧಲಿಂಗೇಶ್ವರ ಜಲಪಾತ ಪ್ರಕೃತಿ ಪ್ರೇಮಿಗಳನ್ನು ಹಾಗೂ ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಕರೆಯುತ್ತಿದೆ.

ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಬಿಸಿಲುನಾಡಿನ ಗವಿ ಸಿದ್ಧಲಿಂಗೇಶ್ವರ ಜಲಪಾತ

ಜಿಲ್ಲಾ ಕೇಂದ್ರದಿಂದ ಕೇವಲ 35 ಕಿಲೋ ಮೀಟರ್ ಕ್ರಮಿಸಿದರೆ ಬೆಟ್ಟ - ಗುಡ್ಡಗಳ ನಡುವೆ ತನ್ನದೇ ಐಸಿರಿ ಹೊತ್ತ ಈ ವಿಶೇಷ ಜಲಪಾತ ಸಿಗುತ್ತದೆ. ಎಲ್ಲ ಋತುವಿನಲ್ಲೂ ಧುಮ್ಮಿಕ್ಕಿ ಹರಿಯುವ ಜಲಪಾತಕ್ಕೆ ಇಲ್ಲಿಯವರೆಗೂ ಬರದ ಛಾಯೆ ಆವರಿಸಿಲ್ಲ. ಇದು ಈ ಜಲಪಾತದ ಮತ್ತೊಂದು ವಿಶೇಷ. ಇಲ್ಲಿನ ಪ್ರಕೃತಿ ಸೌಂದರ್ಯ ಅನುಭವಿಸಲೆಂದೇ ಕಲಬುರಗಿ, ರಾಯಚೂರು ಮತ್ತು ಜಿಲ್ಲೆಯ ಗಡಿಭಾಗದಲ್ಲಿರುವ ಆಂಧ್ರದಿಂದ ನಿತ್ಯ ನೂರಾರು ಪ್ರವಾಸಿಗರು ಬರುತ್ತಾರೆ. ಹಚ್ಚ ಹಸಿರಿನ ಸೊಬಗಿನ ಮಧ್ಯೆ ವಯ್ಯಾರದಿಂದ ಹರಿಯುತ್ತಿರುವ ಜಲಧಾರೆ ನಡುವೆ ನೆನೆದು ಪ್ರವಾಸಿಗರು ಮತ್ತು ಪುಟಾಣಿಗಳು ಗವಿಯೊಳಗೆ ಹೋಗುತ್ತಾರೆ.

ಈ ಜಲಪಾತಕ್ಕೆ ದೈವಿಕ ಸ್ವರೂಪವಿದ್ದು, ಜಲಪಾತದ ಅಡಿ ಗುಹೆಯಲ್ಲಿ ಗವಿ ಸಿದ್ಧಲಿಂಗೇಶ್ವರ ದೇವಸ್ಥಾನವಿದೆ. ವಿಶಿಷ್ಟ ಎಂದರೆ ಗವಿ ಸಿದ್ಧಲಿಂಗೇಶ್ವರನ ದರ್ಶನಕ್ಕೆ ಹೋಗಬೇಕು ಎಂದರೆ ಜಲಪಾತದಿಂದ ಧುಮುಕುವ ನೀರಿನ ಅಡಿಯಲ್ಲೇ ಸಾಗಿ ನೀರಿನಲ್ಲಿ ಮಿಂದೆದ್ದು, ಸಿದ್ಧಲಿಂಗೇಶ್ವರನ ದರ್ಶನ ಪಡೆಯಬೇಕು.

ಜಲಪಾತದ ನೀರಿನಿಂದ ಪವಿತ್ರರಾಗಿ ದೇವರ ದರ್ಶನ ಪಡೆದು ಕೃತಾರ್ಥರಾಗುವುದು ಒಂದೆಡೆಯಾದರೆ, ಜಲಧಾರೆಯ ಅಡಿ ಮಿಂದೆದ್ದು ಹೊರ ಬರುವುದು ಮತ್ತೊಂದೆಡೆ. ಇದು ಪ್ರವಾಸಿಗರನ್ನು ಪುಳಕಿತರನ್ನಾಗಿಸುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.