ಯಾದಗಿರಿ: ವಿವಿಧ ಕಾಮಗಾರಿಗಳ ಅಸಮರ್ಪಕ ನಿರ್ವಹಣೆಗೆ ಅಧಿಕಾರಿಗಳ ವಿರುದ್ಧ ಯಾದಗಿರಿ ಜಿಪಂ ಸಿಇಒ ಶಿಲ್ಲಾ ಶರ್ಮಾ ಫುಲ್ ಗರಂ ಆಗಿ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ.
ಓದಿ: ಬಿಬಿಎಂಪಿಯಲ್ಲಿ ಇ-ಆಸ್ತಿ ತಂತ್ರಾಂಶ ನೂರು ವಾರ್ಡ್ಗಳಿಗೆ ವಿಸ್ತರಣೆ
ಸಿಇಒ ಪ್ರಶ್ನೆಗೆ ಉತ್ತರ ನೀಡಲು ಅಧಿಕಾರಿಗಳು ತಡಬಡಾಯಿಸಿದ್ದಾರೆ. ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ. ವಡಗೇರಾ ತಾಲೂಕಿನ ಬಿಳ್ಹಾರ ಗ್ರಾಮದ ಪ್ರೌಢ ಶಾಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ನಡೆಯುತ್ತಿತ್ತು.
ಈ ವೇಳೆ ವೇದಿಕೆಯಿಂದಿಳಿದು ಏಕಾಏಕಿ ಶಾಲಾ ಆವರಣದಲ್ಲಿನ ಕಾಮಗಾರಿ ವೀಕ್ಷಣೆಗೆ ಸಿಇಒ ಶಿಲ್ಪಾ ಶರ್ಮಾ ಮುಂದಾಗಿದ್ದಾರೆ. ಶಾಲಾ ಮಕ್ಕಳಿಗೆ ಕುಡಿಯುವ ನೀರಿಗಾಗಿ ಜಲ ಜೀವನ್ ಯೋಜನೆಯಡಿ ಕುಡಿಯುವ ನೀರಿನ ಪೈಪ್ಲೈನ್ ಕಾಮಗಾರಿ ಮಾಡಬೇಕಿತ್ತು. ಆದರೆ ಅಧಿಕಾರಿಗಳು ಆ ಕಾಮಗಾರಿಯನ್ನು ನಡೆಸಿರಲಿಲ್ಲ.
ಇದರಿಂದಾಗಿ ಕೆಂಡಾಮಂಡಲರಾದ ಸಿಇಒ ಜನರ ನಡುವೆಯೇ ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡರು. ಇನ್ನು ಬಾಲಕ ಮತ್ತು ಬಾಲಕಿಯರ ಶೌಚಾಲಯ ವೀಕ್ಷಣೆ ಮಾಡಿದ ಸಿಇಒ, ನಿರ್ವಹಣೆ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ನಿರ್ಲಕ್ಷ್ಯ ತೋರಿದ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಶಿಲ್ಪಾ ಶರ್ಮಾ, ಮಾಡಿದ ತಪ್ಪು ತಿದ್ದಿಕೊಂಡು ಒಂದು ವಾರದಲ್ಲಿ ಶಾಲೆಗೆ ಬೇಕಾದ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಬೇಕು. ಇಲ್ಲದಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.