ಯಾದಗಿರಿ : ಕ್ಷುಲ್ಲಕ ಕಾರಣಕ್ಕೆ ಜಗಳ ವಿಕೋಪಕ್ಕೆ ತಿರುಗಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿಯಾಗಿರುವ ಘಟನೆ ಗುರುಮಠಕಲ್ ತಾಲೂಕಿನ ಪುಟ್ ಪಾಸಕ್ ಗ್ರಾಮದಲ್ಲಿ ಜರುಗಿದೆ. ಮಕ್ಕಳು ಮಹಿಳೆಯರು ಎನ್ನದೆ ಕಲ್ಲು, ಬಡಿಗೆಗಳಿಂದ ಹೊಡೆದಾಡಿಕೊಂಡಿದ್ದಾರೆ. ಈ ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಆಹೋರಾತ್ರಿ ಧರಣಿ ಮುಗಿಸುತ್ತಿದ್ದೇವೆ, ಸರ್ಕಾರದ ವಿರುದ್ಧದ ಹೋರಾಟ ನಿಲ್ಲಲ್ಲ: ಸಿದ್ದರಾಮಯ್ಯ
ಈ ಗಲಾಟೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಇಷ್ಟೊಂದು ದೊಡ್ಡ ಪ್ರಮಾಣದ ಗಲಾಟೆಯಾಗಿದ್ದರೂ ಗ್ರಾಮಸ್ಥರು ಪೊಲೀಸ್ ಠಾಣೆಯ ಮೆಟ್ಟಿಲೇರಿಲ್ಲ. ವೈರಲ್ ಆದ ವಿಡಿಯೋ ಆಧರಿಸಿ 20 ಜನರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಗ್ರಾಮದಲ್ಲಿ ಶಾಂತಿ ಕದಡಿದ ಆರೋಪದ ಅಡಿಯಲ್ಲಿ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪೊಲೀಸರು ತಾವೇ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.