ಗುರುಮಠಕಲ್: ರಾಜ್ಯದಲ್ಲಿ ಕೋವಿಡ್-19 ವ್ಯಾಪಿಸುತ್ತಿರುವ ಪ್ರಯುಕ್ತ ಮಾಧ್ಯಮ ಪ್ರತಿನಿಧಿಗಳಿಗೆ ಆರೋಗ್ಯ ತಪಾಸಣೆ ನಡೆಸಲು ಮುಖ್ಯಮಂತ್ರಿಯವರು ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರ ಸೂಚನೆ ಮೇರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ತಾಲೂಕು ಮಾಧ್ಯಮ ಪ್ರತಿನಿಧಿಗಳಿಗೆ ಶುಕ್ರವಾರ ಆರೋಗ್ಯ ತಪಾಸಣೆ ನಡೆಸಲಾಯಿತು.
ಗುರುಮಠಕಲ್ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ (ಡಿಗ್ರಿ ಕಾಲೇಜು) ಪತ್ರಕರ್ತರ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು. ಶಿಬಿರದಲ್ಲಿ ಶ್ವಾಸಕೋಶ, ಜ್ವರ ಹಾಗೂ ರಕ್ತದೊತ್ತಡ ತಪಾಸಣೆಯನ್ನು ನಡೆಸಿ, ವೈದ್ಯಾಧಿಕಾರಿಗಳು ಸಲಹೆಗಳನ್ನು ನೀಡಿದರು. ಆರೋಗ್ಯ ಇಲಾಖೆ ವತಿಯಿಂದ ಪತ್ರಕರ್ತರಿಗೆ ಸ್ಯಾನಿಟೈಸರ್ ಹಾಗೂ ಮಾಸ್ಕ್ಗಳನ್ನು ವಿತರಿಸಲಾಯಿತು.
ಗುರುಮಠಕಲ್ ತಾಲೂಕು ತಹಶೀಲ್ದಾರ ಸಂಗಮೇಶ ಜಿಡಿಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಿವು ಪ್ರಸಾದ ಮೈತ್ರಿ, ಡಾ. ಭಾಗರೆಡ್ಡಿ, ಡಾ. ಜಯಶ್ರೀ ಶೋಭಾ, ಸುಭಾಷ್ ಉಪಸ್ಥಿತರಿದ್ದರು.