ಯಾದಗಿರಿ: ನಕಲಿ ವೈದ್ಯರ ಕ್ಲಿನಿಕ್‍ಗಳ ಮೇಲೆ ಸುರಪುರ ತಾಲೂಕು ಆರೋಗ್ಯಾಧಿಕಾರಿ ಮತ್ತು ಪೊಲೀಸರು ದಾಳಿ ನಡೆಸಿದ್ದಾರೆ.
ಜಿಲ್ಲೆಯ ಹುಣಸಗಿ ತಾಲೂಕಿನ ಕನ್ನೆಳ್ಳಿ ಗ್ರಾಮದ ಇಬ್ಬರು ನಕಲಿ ವೈದ್ಯರ ಕ್ಲಿನಿಕ್‍ಗಳನ್ನು ತಾಲೂಕು ಆರೋಗ್ಯಾಧಿಕಾರಿ ಡಾ. ರಾಜಾ ವೆಂಕಪ್ಪ ನಾಯಕ ಅವರು ಪರಿಶೀಲಿಸಿದರು.
ಈ ವೇಳೆ ನಕಲಿ ವೈದ್ಯರ ಬಳಿ ಕೆಪಿಎಂಇ ನೋಂದಣಿ ದಾಖಲೆಗಳು ಇಲ್ಲದಿರುವುದು ಕಂಡು ಬಂದಿದೆ. ನಿಯಮ ಬಾಹಿರವಾಗಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಕ್ಲಿನಿಕ್‍ಗಳಿಗೆ ಬೀಗ ಹಾಕಿ ಬಂದ್ ಮಾಡಲಾಗಿದೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋವಿಡ್-19 ಸಾಂಕ್ರಾಮಿಕ ರೋಗ ತಡೆಗಟ್ಟುವ ಹಿನ್ನಲೆಯಲ್ಲಿ ಜಿಲ್ಲೆಯ ಆರ್ಎಂಪಿ/ ನಕಲಿ ವೈದ್ಯರ ವೈದ್ಯಕೀಯ ತಪಾಸಣೆ ಸ್ಥಗಿತಗೊಳಿಸಲಾಗಿದೆ. ಜಿಲ್ಲಾಡಳಿತದ ಸೂಚನೆಗೆ ಬೆಲೆ ಕೊಡದೇ ತಪಾಸಣೆಗೆ ಮುಂದಾದರೇ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ್ ಎಚ್ಚರಿಸಿದ್ದಾರೆ.